ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

25ರಂದು ಜಾಗೃತಿ ಕಾರ್ಯಕ್ರಮ

Vishwanath S
Updated On : 14 Apr 2013, 12:34 pm

ರಾಯಚೂರು: ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳ ಚುನಾವಣೆಯ ಮತದಾನವು ಮೇ 5ರಂದು ಬೆಳಗ್ಗೆ 7ರಿಂದ ಸಂಜೆಯ 5ರ ವರೆಗೆ ನಡೆಯಲಿದೆ. ವಿಧಾನಸಭೆ ಚುನಾವಣೆಗಿಂತ ಮೊದಲು ಶಾಲಾ ಮಕ್ಕಳಿಂದ ಮತದಾರರೇ ಮತದಾನ ಮಾಡಿ ಎಂಬ ಜಾಗೃತಿ ಕಾರ್ಯಕ್ರಮವನ್ನು ಏ. 25ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಜಿಲ್ಲೆಯ ಎಲ್ಲ ತಾಲೂಕುಗಳ ಪ್ರಾಥಮಿಕ, ಮಾಧ್ಯಮಿಕ ಶಾಲೆಗಳನ್ನು ಕರ್ತವ್ಯದಲ್ಲಿರಿಸಿ ಶಾಲಾ ಮಕ್ಕಳು ಹಾಗೂ ಶಿಕ್ಷಕರು ಕರ್ತವ್ಯ ನಿರ್ವಹಿಸುವಂತೆ ರಾಯಚೂರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸೂಚಿಸಿದ್ದಾರೆ.
ಶಾಲಾ ಮಕ್ಕಳಿಂದ ಎಲ್ಲ ಮತದಾರರು ಮತದಾನದಲ್ಲಿ ಭಾಗವಹಿಸಬೇಕು ಎಂಬ ಜಾಗೃತಿ ಕಾರ್ಯಕ್ರಮ ಕುರಿತು ಮಕ್ಕಳಿಂದ ಗ್ರಾಮದಲ್ಲಿ ಜಾಥಾ ಏರ್ಪಡಿಸಿ ಮತದಾರರಿಗೆ ಮತದಾನದಲ್ಲಿ ಭಾಗವಹಿಸುವ ಕುರಿತು ಒಂದು ಸಂದೇಶ ಸಾರುವಂತೆ ಸೂಚಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಡಿಡಿಪಿಐ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement