ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದಲಿತ ಪ್ಯಾಂಥರ್ಸ್ ಕಾಂಗ್ರೆಸ್‌ಗೆ ಬೆಂಬಲ

Vishwanath S
Updated On : 14 Apr 2013, 12:38 pm

ರಾಯಚೂರು: ಪ್ರಸಕ್ತ ಚುನಾವಣೆಯಲ್ಲಿ ಭಾರತೀಯ ದಲಿತ ಪ್ಯಾಂಥರ್ಸ್ ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷ ತಿಮ್ಮಾರೆಡ್ಡಿ ಹೇಳಿದರು.
ನಗರದಲ್ಲಿ ಶನಿವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಛಲವಾದಿ ಸಮಾಜದ ಒಂದು ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಮತದಾರರಿದ್ದಾರೆ. ಪ್ರತಿ ಕ್ಷೇತ್ರದಲ್ಲಿಯೂ 16 ಸಾವಿರ ಛಲವಾದಿ ಸಮಾಜದವರಿದ್ದಾರೆ. ಇದುವರೆಗೆ ವಿವಿಧ ಪಕ್ಷಗಳು ಮತಬ್ಯಾಂಕ್ ಆಗಿ ಬಳಕೆ ಮಾಡಿ ನಂತರ ನಿರ್ಲಕ್ಷಿಸಿವೆ ಎಂದು ಟೀಕಿಸಿದರು.
ಛಲವಾದಿ ಸಮಾಜಕ್ಕೆ ರಾಜಕೀಯ ಕ್ಷೇತ್ರದಲ್ಲಿ ಸೂಕ್ತ ಪ್ರಾತಿನಿಧ್ಯ ನೀಡುವಲ್ಲಿ ಎಲ್ಲ ಪಕ್ಷಗಳು ಅಸಡ್ಡೆ ತೋರಿವೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವ ನಿಟ್ಟಿನಲ್ಲಿ ರಾಜಕೀಯ ಕ್ಷೇತ್ರದಲ್ಲಿ ಆದ್ಯತೆ ಸೇರಿದಂತೆ ವಿವಿಧ ಬೇಡಿಕೆಗಳೊಂದಿಗೆ ಬೆಂಬಲಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮುಂದಿನ ದಿನಗಳಲ್ಲಿ ಛಲವಾದಿ ಸಮಾಜದವರಿಗೆ ವಿವಿಧ ನಿಗಮ ಮಂಡಳಿಗಳಿಗೆ ನೇಮಕ, ಆಶ್ರಯ ಸಮಿತಿಯಲ್ಲಿ ನೇಮಕ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಿಸುವಂತೆ ಒತ್ತಾಯಿ ಸಲಾಗುತ್ತದೆ. ಅದೇ ಭರವಸೆಯೊಂದಿಗೆ ಕಾಂಗ್ರೆಸ್‌ಗೆ ಬೆಂಬಲಿಸಲಾಗುತ್ತಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement