ಪ್ರಚಾರಕ್ಕೆ ಮಕ್ಕಳ ಬಳಕೆ ನಿಷಿದ್ಧ
ರಾಯಚೂರು: ಚುನಾವಣಾ ಆಯೋಗದ ಸೂಚನೆಯಂತೆ ಪ್ರಸಕ್ತ ಚುನಾವಣೆಯಲ್ಲಿ ರಾಜಕೀಯ ಪಕ್ಷದವರು ಶಾಲಾ ಮಕ್ಕಳಿಗೆ ಹಣ ನೀಡಿ ಪಕ್ಷದ ಪ್ರಚಾರಕ್ಕಾಗಿ ಬಳಸಿಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತ ಎಚ್ಚರಿಸಿದೆ. ಈ ಕುರಿತು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ನೀಡಿದ್ದು, ಜಿಲ್ಲೆಯ ಎಲ್ಲ ರಾಜಕೀಯ ಪಕ್ಷದವರು ಚುನಾವಣಾ ಪ್ರಚಾರಕ್ಕೆ ಶಾಲಾ ಮಕ್ಕಳನ್ನು ಬಳಸಿಕೊಳ್ಳಬಾರದೆಂದು ಸೂಚಿಸಿದ್ದಾರೆ.