'ಬಿಜೆಪಿ ಅನುಷ್ಠಾನಕ್ಕೆ ತಂದ ಕಾರ್ಯಕ್ರಮ ರೂಪಿಸಿದ್ದು ಎಚ್ಡಿಕೆ'
ಮಸ್ಕಿ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರು ತಮ್ಮ ಅಧಿಕಾರ ಅವಧಿಯಲ್ಲಿ ಮಾಡಿದ ಜನಪರ ಸಾಧನೆಗಳನ್ನು ಜನರಿಗೆ ವಿವರಿಸಿ ಪಕ್ಷವನ್ನು ಬೆಂಬಲಿಸಲು ಜೆಡಿಎಸ್ ಅಭ್ಯರ್ಥಿ ಅಮರೇಶ ನಾಯಕ ಮನವಿ ಮಾಡಿದರು.
ಅವರು ಇಲ್ಲಿಗೆ ಸಮೀಪದ ಸಂತೆಕೆಲ್ಲೂರು ಗ್ರಾಮದಲ್ಲಿ ಶನಿವಾರ ಪಕ್ಷ ಸೇರ್ಪಡೆಯ ಕಾರ್ಯಕ್ರಮದ ನಂತರ ಮಾತನಾಡಿ, ಬಿಜೆಪಿ ಸರ್ಕಾರ ಅನುಷ್ಠಾನಕ್ಕೆ ತಂದಿರುವ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದವರು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಹೇಳಿದರು.
ಮಸ್ಕಿ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಅವರು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಪರ್ವತ ರೆಡ್ಡಿ, ಅಮರೇಶ ಕಾಟಗಲ್, ರಾಮು, ಶರಣಬಸವ ಗುಡಿಹಾಳು, ಬಸವನಗೌಡ ಪೊಲೀಸ್ ಪಾಟೀಲ್ ಮತ್ತಿತರರಿದ್ದರು. ಇದೇ ವೇಳೆ ಅನೇಕರು ಜೆಡಿಎಸ್ ಪಕ್ಷವನ್ನು ಸೇರಿದರು.