ಅಂಬೇಡ್ಕರ್ ಪುತ್ಥಳಿಗೆ ಗೌರವ ಸಮರ್ಪಣೆ
ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಭಾನುವಾರ ಅಂಬೇಡ್ಕರ್ ಅವರ 122ನೇ ಜಯಂತಿ ಅಂಗವಾಗಿ ಪುತ್ಥಳಿಗೆ ವಿವಿಧ ಇಲಾಖೆಯ ಅಧಿಕಾರಿಗಳು ಗೌರವ ಸಲ್ಲಿಸಿದರು.
ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರರ ಪುತ್ಥಳಿಗೆ ಜಿಲ್ಲಾಧಿಕಾರಿ ಉಜ್ವಲ್ಕುಮಾರ ಘೋಷ್, ಜಿಲ್ಲಾ ಪೊಲೀಸ್ ಅಧೀಕ್ಷಕ ಎಸ್.ಬಿ. ಬಿಸನಳ್ಳಿ, ಜಿಪಂ ಸಿಇಒ ಜ್ಞಾನ ಪ್ರಕಾಶ, ಸಹಾಯಕ ಆಯುಕ್ತೆ ಎನ್. ಮಂಜುಶ್ರೀ ಮತ್ತಿತರ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಡಿವೈಎಸ್ಪಿ ಡಾ. ದಿವ್ಯಾ ಗೋಪಿನಾಥ, ಪೌರಾಯುಕ್ತ ಮಂಜುನಾಥ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಸಿರಸಗಿಕರ್ ನಾಗಣ್ಣ ಸೇರಿ ವಿವಿಧ ಇಲಾಖೆಯ ಸಿಬ್ಬಂದಿ ಹಾಗೂ ದಲಿತ ಪರ ಸಂಘಟನೆಗಳ ನಾಯಕರು ಮತ್ತು ಕಾರ್ಯಕರ್ತರು ಇದ್ದರು.