ಅಕ್ರಮ ಮದ್ಯ ಜಪ್ತಿ
ರಾಯಚೂರು: ತಾಲೂಕಿನ ಯರಗೇರಾ ಗ್ರಾಮದಲ್ಲಿ ಅಕ್ರಮವಾದಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ರಹಿಮೂದ್ದೀನ್ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಅವನಿಂದ 4191 ಮೌಲ್ಯದ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಅಬಕಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಟಕಾ: ಒಬ್ಬನ ಬಂಧನ
ರಾಯಚೂರು: ಸಿಂಧನೂರು ತಾಲೂಕಿನ ಆರ್.ಎಚ್. ಕ್ಯಾಂಪ್ 3ರಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಪ್ರಹ್ಲಾದ್ ಎಂದು ಗುರುತಿಸಲಾಗಿದೆ. ಈತ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಚೀಟಿ ಬರೆಯುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ 760 ನಗದು ಜಪ್ತಿ ಮಾಡಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.