ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮುಸ್ಲಿಮರ ಅಭಿವೃದ್ಧಿಗೆ ಬಿಎಸ್ವೈ ಕೊಡುಗೆ ಅಪಾರ: ಖುರೇಶಿ

Lingaraj Badiger
Updated On : 17 Apr 2013, 11:56 am

ಮುದಗಲ್: ರಾಜ್ಯದಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾದಾಗ ಮುಸ್ಲಿಂ ಸಮಾಜದ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸಿದ್ದಾರೆ ಎಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಖುಸ್ರೋ ಖುರೇಶಿ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದ 25 ಜಿಲ್ಲೆಗಳಲ್ಲಿ ತಾವು ಪ್ರವಾಸ ಮಾಡಿದ್ದು ಕೆಜೆಪಿಗೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗಿದ್ದಾಗ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 415 ಕೋಟಿ, ಅನುದಾನವನ್ನು ನೀಡಿ ಅಲ್ಪಸಂಖ್ಯಾತರು ಸ್ವಾಭಿಮಾನಿಗಳಾಗಿ ಜೀವನ ಸಾಗಿಸುವಂತೆ ಮಾಡಿದ್ದಾರೆ. ರಾಜ್ಯದಲ್ಲಿ ಕೆಜೆಪಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರ ಅಭಿವೃದ್ಧಿಗೆ 2 ಸಾವಿರ ಕೋಟಿ ನೀಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಲಾಗಿದೆ ಎಂದರು.
ಅಲ್ಲದೆ, ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಮರಿಗೆ ಹೆಚ್ಚಿನ ಟಿಕೆಟ್ ನೀಡಿರುವ ಪಕ್ಷ ಕೆಜೆಪಿಯಾಗಿದೆ. ರಾಜ್ಯದಲ್ಲಿ ಕೆಜೆಪಿ ಅಧಿಕಾರಕ್ಕೆ ಬರುವುದು ಖಚಿತವಾಗಿದ್ದು, ರಾಜ್ಯದ ಮತ್ತು ಲಿಂಗಸ್ಗೂರು ವಿಧಾನಸಭೆ ಕ್ಷೇತ್ರದ ಮುಸ್ಲಿಂ ಜನತೆ ಕೆಜೆಪಿ ಅಭ್ಯರ್ಥಿಗೆ ಮತ ನೀಡಬೇಕೆಂದು ಮನವಿ ಮಾಡಿದರು.
ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮತಚಲಾಯಿಸಿದರು. ಕೆಜೆಪಿ ಅಭ್ಯರ್ಥಿ ಎಚ್.ಬಿ. ಮುರಾರಿ, ಕೆಜೆಪಿ ಮುಖಂಡ ಅನ್ವರ್ಮಿಯಾ ಸಿಂಧನೂರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement