ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದಾಖಲೆಗಳಿಲ್ಲದ ಹಣ ಪತ್ತೆ

Lingaraj Badiger
Updated On : 18 Apr 2013, 11:07 am

ರಾಯಚೂರು/ಸಿಂಧನೂರು: ಸಿಂಧನೂರು ತಾಲೂಕಿನ ಧಡೇಸೂಗೂರು ಚೆಕ್‌ಪೋಸ್ಟ್ ಬಳಿ ವಾಹನವೊಂದರಲ್ಲಿ 3.80 ಲಕ್ಷ ಪತ್ತೆಯಾಗಿವೆ. ಗೋವಿಂದೇಗೌಡ ಎಂಬುವವರು ಹಣವನ್ನು ಕಾರನಲ್ಲಿ ಕೊಂಡೊಯ್ಯುತ್ತಿದ್ದಾಗ ಚೆಕ್‌ಪೋಸ್ಟ್ ಬಳಿ ವಾಹನಗಳ ತಪಾಸಣೆ ನಡೆಸುತ್ತಿದ್ದ ಸಿಂಧನೂರು ಗ್ರಾಮೀಣ ಪೊಲೀಸರಿಗೆ ವಾಹನವೊಂದರಲ್ಲಿ ಸೂಕ್ತ ದಾಖಲೆಗಳಿಲ್ಲದ 3.80 ಲಕ್ಷ ಪತ್ತೆಯಾಗಿದ್ದು, ಈ ಕುರಿತು ಕೇಸ್ ದಾಖಲಿಸಲಾಗಿದೆ. ವಾಹನದಲ್ಲಿ ಹಣವನ್ನು ಸಿಂಧನೂರಿನತ್ತ ಸಾಗಿಸಲಾಗುತ್ತಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಅಕ್ರಮ ಮದ್ಯ:
ಒಬ್ಬನ ಬಂಧನ
ರಾಯಚೂರು: ತಾಲೂಕಿನ ಚಂದ್ರಬಂಡಾ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಈರೇಶ್ ಎಂದು ಗುರುತಿಸಲಾಗಿದೆ. ಈತ ಗ್ರಾಮದಲ್ಲಿ ಲಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ವಿವಿಧ ಕಂಪನಿಗಳ 2,127 ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಈ ಕುರಿತು ಅಬಕಾರಿ ವಿಶೇಷ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
3 ಲಕ್ಷ ಅಕ್ರಮ
ನಗದು ಜಪ್ತಿ
ರಾಯಚೂರು: ದೇವದುರ್ಗ ತಾಲೂಕಿನ ಗೂಗಲ್ ಗ್ರಾಮದ ಚೆಕ್ ಪೋಸ್ಟ್‌ನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 3 ಲಕ್ಷ ನಗದು ಹಾಗೂ ವಾಹನವೊಂದನ್ನು ಜಪ್ತಿ ಮಾಡಲಾಗಿದೆ. ಖತಾಲಸಾಬ್ ಮತ್ತು ಚಾಂದ್ ಸಾಬ್ ಎಂಬುವವರು ಟಾಟಾ ಏಸ್‌ನಲ್ಲಿ ದಾಖಲೆಗಳಿಲ್ಲದೇ 3 ಲಕ್ಷ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಅಧಿಕಾರಿಗಳು ತಪಾಸಣೆ ನಡೆಸಿ ಅಕ್ರಮ ಹಣ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಗಬ್ಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ಜಪ್ತಿ
ರಾಯಚೂರು: ನಗರದ ಚಂದ್ರಬಂಡಾ ರಸ್ತೆಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು 1.36 ಲಕ್ಷ ಮೌಲ್ಯದ ಮದ್ಯ ಜಪ್ತಿ ಮಾಡಿ ಒಬ್ಬನನ್ನು ಬಂಧಿಸಿದ್ದಾರೆ. ಬಂಧಿತನನ್ನು ಜಂಬನಗೌಡ ಎಂದು ಗುರುತಿಸಲಾಗಿದೆ. ಈತ ಮಂಗಳವಾರ ರಾತ್ರಿ ಅಕ್ರಮವಾಗಿ 62 ಬಾಕ್ಸ್ ಗಳಲ್ಲಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು, ಆರೋಪಿಯನ್ನು ಬಂಧಿಸಿ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಕುರಿತು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
1950ಗೆ ದೂರು
ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯುವ ಚುನಾವಣೆಯ ಹಿನ್ನೆಲೆಯಲ್ಲಿ ಚುನಾವಣೆಗೆ ಸಂಬಂಧಿಸಿದ ಎಲ್ಲ ದೂರುಗಳನ್ನು 1950ಗೆ ಸಲ್ಲಿಸಲು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣೆಗೆ ಸಂಬಂಧಿಸಿದ ಎಲ್ಲ ದೂರುಗಳನ್ನು ಸ್ವೀಕರಿಸಲು ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ದೂರವಾಣಿ ಸ್ಥಾಪಿಸಲಾಗಿದೆ. ದೂರು ನೋಂದಣಿ ಪ್ರಕ್ರಿಯೆ ಪ್ರತಿ ದಿನವೂ 24 ಗಂಟೆ ಕಾರ್ಯನಿರ್ವಹಿಸಲಿದ್ದು, ದೂರುಗಳನ್ನು ನೇರವಾಗಿ ಈ ನಂಬರ್‌ಗೆ ಕರೆ ಮಾಡುವ ಮೂಲಕ ದಾಖಲಿಸಬಹುದಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement