ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದೇವದುರ್ಗ; ಹಲವರಿಂದ ನಾಮಪತ್ರ ಸಲ್ಲಿಕೆ

Lingaraj Badiger
Updated On : 18 Apr 2013, 11:06 am

ದೇವದುರ್ಗ: ದೇವದುರ್ಗ ಎಸ್ಟಿ ಮೀಸಲು ವಿಧಾನಸಭೆ ಕ್ಷೇತ್ರಕ್ಕೆ ಮೇ.5ರಂದು ನಡೆಯಲಿರುವ ಚುನಾವಣೆಗೆ ಬುಧವಾರ ಅನೇಕರು ನಾಮಪತ್ರ ಸಲ್ಲಿಸಿದರು.
ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದ ಎ. ವೆಂಕಟೇಶ ನಾಯಕ, ಕೆಜೆಪಿಯಿಂದ ಶಾಂತಗೌಡ, ಸಂಯುಕ್ತ ಜನತಾ ದಳದ ಚನ್ನಬಸವ ನಾಯಕ ಜುಟಮರಡಿ, ಸಿಪಿಎಂಎಲ್‌ನ ಜಿ. ಬಸವರಾಜ ನಾಯಕ ತಮ್ಮ ನಾಮಪತ್ರ ಸಲ್ಲಿಸಿದರು.
ಕೆಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಹಿಂದುಳಿದ ದೇವದುರ್ಗ ತಾಲೂಕಿಗೆ ಮಾಜಿ ಸಿಎಂ ಯಡಿಯೂರಪ್ಪ ಅವರ ಅಧಿಕಾರವಧಿಯಲ್ಲಿ ಎರಡು ಸಾವಿರ ಕೋಟಿ ರು. ಬಿಡುಗಡೆಯಾಗಿದ್ದು ಅನುದಾನದ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಕೆಜೆಪಿ ಅಭ್ಯರ್ಥಿ ಶಾಂತಗೌಡ ಆರೋಪಿಸಿದರು.
ಅವರು ಬುಧವಾರ ಪಟ್ಟಣದಲ್ಲಿ ತಮ್ಮ ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಜನತೆ ಯಡಿಯೂರಪ್ಪ ಕೈಗೊಂಡ ಅಭಿವೃದ್ಧಿ ಕಾರ್ಯ ಮೆಚ್ಚಿ ತಮಗೆ ಮತ ನೀಡಲಿದ್ದಾರೆಂದು ಹೇಳಿದರು.
ಶಾಸಕರ ದಬ್ಬಾಳಿಕೆ, ದೌರ್ಜನ್ಯ ಇನ್ನು ಮುಂದೆ ಕ್ಷೇತ್ರದಲ್ಲಿ ನಡೆಯದು. ಶಾಸಕ ಶಿವನಗೌಡ ನಾಯಕ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಸೌಲಭ್ಯ ಕೇಳಿದ ಮತದಾರರ ಮೇಲೆ ವಿನಾ ಕಾರಣ ಪ್ರಕರಣ ದಾಖಲಿಸುವ ಕಾರ್ಯ ಮಾಡಿದ್ದಾರೆಂದು ಟೀಕಿಸಿದರು.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement