ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಆಸ್ಪತ್ರೆ ಅವ್ಯವಸ್ಥೆ; ಕ್ರಮಕ್ಕೆ ಸಂಘಟನೆ ಆಗ್ರಹ

Rashmi Kasaragodu
Updated On : 20 Apr 2013, 11:37 am

ರಾಯಚೂರು: ನಗರದ ಮಾವಿನಕೆರೆ ಬಳಿಯಿರುವ ಪ್ರಾಥಮಿಕ ಪ್ರಸೂತಿ ಕೇಂದ್ರದಲ್ಲಿನ ಅವ್ಯವಸ್ಥೆ ಸರಿಪಡಿಸುವಂತೆ ಹಾಗೂ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ನವನಿರ್ಮಾಣ ಸೇನೆ ಆಗ್ರಹಿಸಿದೆ. ಈ ಕುರಿತು ಜಿಪಂ ಸಿಇಒಗೆ ದೂರಿತ್ತಿರುವ ಸಂಘಟನೆಯ ನಗರಾಧ್ಯಕ್ಷ ಮಹೇಶ್ ಕುಮಾರ್, ಇತ್ತೀಚೆಗೆ ಸಂತಾನ ನಿರೋಧಕ ಶಸ್ತ್ರಚಿಕಿತ್ಸೆಗೆಂದು ಆಗಮಿಸುವ ಮಹಿಳೆಯರಿಗೆ ಯಾವುದೇ ಶಸ್ತ್ರಚಿಕಿತ್ಸೆ ಪೂರ್ವ ತಪಾಸಣೆಗಳನ್ನು ಕೈಗೊಳ್ಳದೇ ಕಾಯುವಂತೆ ಸೂಚಿಸುವ ಕಾರ್ಯ ವೈದ್ಯರು ಮಾಡುತ್ತಿದ್ದಾರೆ. ಇದರಿಂದ ಮಹಿಳೆಯರಿಗೆ ತೊಂದರೆಯಾಗಿದೆ ಎಂದು ಆರೋಪಿಸಿದ್ದಾರೆ. ಕೂಡಲೇ ನಿರ್ಲಕ್ಷ್ಯ ತೋರಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು. ಆಸ್ಪತ್ರೆಯಲ್ಲಿನ ಅವ್ಯವಸ್ಥೆ ಸರಿಪಡಿಸಬೇಕೆಂದು ಆಗ್ರಹಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement