ಮತದಾನ ಜಾಗೃತಿಗಾಗಿ ಬೀದಿ ನಾಟಕ
ಕನ್ನಡಪ್ರಭ ವಾರ್ತೆ ರಾಯಚೂರು ಏ.19
ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಯಲ್ಲಿ ಮತದಾನ ಪ್ರಮಾಣ ಗರಿಷ್ಟ ಮಟ್ಟದಲ್ಲಿ ನಡೆಯುವಂತೆ ಮಾಡಲು ಮತದಾರರಲ್ಲಿ ಮತದಾನ ಹಕ್ಕಿನ ಜಾಗೃತಿ ಮೂಡಿಸಲು ಜಿಲ್ಲೆಯ ಆಯ್ದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಏ.19ರಿಂದ ಮೇ 1 ರವರೆಗೆ ಬೀದಿ ನಾಟಕ ಪ್ರದರ್ಶನ ಆಯೋಜಿಸಲಾಗಿದೆ.
ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳಲ್ಲಿ ಈ ಹಿಂದೆ ಕಡಿಮೆ ಪ್ರಮಾಣದಲ್ಲಿ ಮತದಾನ ನಡೆದಿರುವುದರಿಂದ ಬೀದಿ ನಾಟಕ ಪ್ರದರ್ಶನಕ್ಕಾಗಿ ನಕಾಶೆ ತಯಾರಿಸಿದ್ದು, ಮತದಾರರು ಕಡ್ಡಾಯ ಮತದಾನ ಮಾಡುವಂತೆ ಜಾಗೃತಿ ಮೂಡಿಸಲು ಡಿಂಗ್ರಿ ನರಸಪ್ಪ ಹಾಗೂ ಡಿಂಗ್ರಿ ನರೇಶ ನೀನಾಸಂ ನೇತೃತ್ವದ ತಂಡಗಳು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಪ್ರಚಾರ ಗೀತೆ, ಬೀದಿ ನಾಟಕಗಳ ಮೂಲಕ ಜಾಗೃತಿ ಮೂಡಿಸಲಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.