ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸಿಬ್ಬಂದಿಗೆ ಅಂಚೆ ಮತಪತ್ರ ವಿತರಣೆ

Rashmi Kasaragodu
Updated On : 20 Apr 2013, 11:35 am

ರಾಯಚೂರು: ಜಿಲ್ಲೆಯಲ್ಲಿ ಮೇ 5ರಂದು ನಡೆಯಲಿರುವ ಚುನಾವಣೆಗೆ ನಿಯೋಜಿತ ಸಿಬ್ಬಂದಿಗೆ ಅಂಚೆಮತ ಪತ್ರಗಳ ವಿತರಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಸಿಬ್ಬಂದಿಗೆ ಅಂಚೆ ಮತ ಪತ್ರಗಳನ್ನು ವಿತರಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳನ್ನು ನೇಮಿಸಿದ್ದು, ರಾಯಚೂರು ಗ್ರಾಮೀಣ ಕ್ಷೇತ್ರಕ್ಕೆ ರಾಯಚೂರು ಬಿಇಒ, ರಾಯಚೂರು ನಗರ ಕ್ಷೇತ್ರಕ್ಕೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿಗಳು, ಹಿರಿಯ ವಿಷಯ ಪರಿವೀಕ್ಷಕರನ್ನು ಮಸ್ಕಿ, ಮಾನವಿ, ದೇವದುರ್ಗ, ಲಿಂಗಸ್ಗೂರು, ಸಿಂಧನೂರು ಕ್ಷೇತ್ರಗಳ ಸಿಬ್ಬಂದಿಗೆ ಅಂಚೆ ಮತಪತ್ರ ವಿತರಿಸಲು ನಿಯೋಜಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement