ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮ
ರಾಯಚೂರು: ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಮತ್ತಿತರೆ ಸಂಸ್ಥೆಯಿಂದ ಇತ್ತೀಚೆಗೆ ಮತದಾರರ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯ ರಾಜೇಶ್ ಬಾವಗಿ ವಹಿಸಿ ಮಾತನಾಡಿ, ಯುವಶಕ್ತಿ ದೇಶದ ಬೆನ್ನೆಲುಬು. ದೇಶದ ಒಳ್ಳೆಯ ನಾಯಕರನ್ನು ಆಯ್ಕೆ ಮಾಡುವಂತಹ ಅಧಿಕಾರ ಮತದಾರರಿಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಯುವಜನ ಸೇವಾಧಿಕಾರಿ ಆರ್.ಎಸ್. ಕಣಬರಗಿ, ಗ್ರಾಮೀಣ ಭಾಗದಲ್ಲಿ ಮತದಾನದ ಪ್ರಮಾಣ ಹೆಚ್ಚುತ್ತಿದ್ದು ನಗರ ಪ್ರದೇಶಗಳಲ್ಲಿ ಇದು ಕ್ಷೀಣಿಸುತ್ತಿದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವ ದಿಸೆಯಲ್ಲಿ ಕೂಡಲೇ ಮುಂದಾಗಿ, ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕೆಂದರು. ನೆಹರು ಯುವ ಕೇಂದ್ರದ ಸಂಯೋಜಕ ಬಿ.ಎಸ್. ಹಿರೇಮಠ ಮಾತನಾಡಿದರು