ನಾಳೆ ಮತದಾನ ಜಾಗೃತಿ ಕಾರ್ಯಕ್ರಮ
ರಾಯಚೂರು: ನಗರದ ಸಿದ್ದರಾಮ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಏ.24ರಂದು ಮತದಾರರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಜಿಲ್ಲೆಯಲ್ಲಿ ಸಾಕ್ಷರತಾ ಭಾರತ್ ಕಾರ್ಯಕ್ರಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಕರು, ನವ ಸಾಕ್ಷರರು ಹಾಗೂ ಸಾಕ್ಷರತಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಸಂಘ-ಸಂಸ್ಥೆಗಳವರು ಜಿಲ್ಲೆಯ ವಿವಿಧ ತಾಲೂಕಿನಿಂದ ಆಗಮಿಸುವ ಕಾರ್ಯಕರ್ತರು ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶೇ.100ರಷ್ಟು ಮತದಾನವಾಗುವಂತೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಹಮ್ಮಿಕೊಂಡ ಶಿಬಿರದಲ್ಲಿ ಭಾಗವಹಿಸುವಂತೆ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಇಂದಿರಾ ಮನವಿ ಮಾಡಿದ್ದಾರೆ.