'ಮತದಾನದ ಬಗ್ಗೆ ಅರಿವು ಮೂಡಿಸಿ'
ರಾಯಚೂರು: ಜಿಲ್ಲಾ ವಾಣಿಜ್ಯೋದ್ಯಮ ಸಂಘ ಮತ್ತಿತರೆ ಸಂಘ-ಸಂಸ್ಥೆಗಳಿಗೆ ಮತದಾನದ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ರೀತಿಯ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಇತ್ತೀಚೆಗೆ ಕರೆದಿದ್ದ ಸಭೆಯಲ್ಲಿ ಜಿಲ್ಲಾಡಳಿತ ಮನವಿ ಮಾಡಿತು.
ಜೀಸಸ್, ರೋಟರಿ ಸಂಸ್ಥೆಗಳು ಹಾಗೂ ಜಿಲ್ಲಾಡಳಿತದ ಸಹಭಾಗಿತ್ವದಲ್ಲಿ ಮೇ 5ರಂದು ನಡೆಯುವ ಚುನಾವಣೆಗೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮತದಾನದ ಪ್ರಮಾಣ ಹೆಚ್ಚಿಸಲು ಕೋರಲಾಯಿತು. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಚುನಾವಣಾಧಿಕಾರಿ ಉಜ್ವಲ್ಕುಮಾರ್ ಘೋಷ್ ವಹಿಸಿದ್ದರು. ಸಭೆಯಲ್ಲಿ ಸಹಾಯಕ ಆಯುಕ್ತೆ ಎನ್. ಮಂಜುಶ್ರೀ ಮತ್ತಿತರೆ ಅಧಿಕಾರಿಗಳು ಇದ್ದರು.