ಅಕ್ರಮ ಮದ್ಯ ವಶ: 15 ಪ್ರಕರಣ ದಾಖಲು
ಸಿಂಧನೂರು: ತಾಲೂಕಿನಲ್ಲಿ ವಿವಿಧೆಡೆ ಅಕ್ರಮವಾಗಿ ಮದ್ಯ ಸಂಗ್ರಹ ಮಾಡಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 15 ಪ್ರಕರಣಗಳನ್ನು ಇಲ್ಲಿಯವರೆಗೆ ದಾಖಲು ಮಾಡಲಾಗಿದೆ ಎಂದು ತಹಸೀಲ್ದಾರ್ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ. ಇಲ್ಲಿಯವರೆಗೆ 26 ಕಡೆ ಅಕ್ರಮ ಮದ್ಯ ವಶಕ್ಕೆ ಸಂಬಂಧಿಸಿದಂತೆ ದಾಳಿ ನಡೆಸಲಾಗಿದೆ. 15 ಪ್ರಕರಣಗಳಲ್ಲಿ 10 ಜನರನ್ನು ಬಂಧಿಸಲಾಗಿದೆ. 138.78 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮ ಮದ್ಯದ ಒಟ್ಟು ಮೌಲ್ಯ 29,035 ಇರುತ್ತದೆ ಎಂದು ತಿಳಿಸಿದ್ದಾರೆ.