ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಬಿವಿಪಿಯಿಂದ ಮತದಾನ ಜಾಗೃತಿ ಜಾಥಾ

Rashmi Kasaragodu
Updated On : 26 Apr 2013, 11:19 am

ಸಿಂಧನೂರು: ತಾಲೂಕಿನ ಬಳಗಾನೂರು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ನಿಂದ ಮತದಾನ ಜಾಗೃತಿ ಜಾಥಾವನ್ನು ಪ್ರಮುಖ ಬೀದಿಗಳಲ್ಲಿ ನಡೆಸಲಾಯಿತು. ಗ್ರಾಮದ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ ಕುರಿತು ವಿವಿಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಎಬಿವಿಪಿ ಮುಖಂಡ ನಿರುಪಾದಿ ಎಂ.ಬಿ. ಮಾತನಾಡಿ, ಮತದಾನ ಪ್ರತಿಯೊಬ್ಬರ ಸಂವಿಧಾನ ಬದ್ದ ಹಕ್ಕಾಗಿದ್ದು. ನೈಜ ಪ್ರಜಾಪ್ರಭುತ್ವ ಅಸ್ತಿತ್ವಕ್ಕೆ ಬರಲು ಸಹಕರಿಸಬೇಕು ಮನವಿ ಮಾಡಿದರು. ಜಾಥಾದಲ್ಲಿ ಬಸಲಿಂಗಯ್ಯಸ್ವಾಮಿ, ಎಂ.ಡಿ. ಆಸೀಫ್ ಚೌದ್ರಿ, ಹನುಮಂತ, ಶಿವು ಬಸವರಾಜ ಚನ್ನಪ್ಪ ಸೇರಿದಂತೆ ವಿವಿಧ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement