ಜಾಗೃತಿ ಕಾರ್ಯಕ್ರಮ ಯಶಸ್ವಿ
ರಾಯಚೂರು: ತಾಲೂಕಿನ ಯದ್ಲಾಪುರ ಗ್ರಾಪಂ, ಲೋಕ ಶಿಕ್ಷಣ ಸಮಿತಿ ವತಿಯಿಂದ ಇತ್ತೀಚೆಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಗ್ರಾಮದಲ್ಲಿ ಮನೆ ಮನೆಗೆ ಭೇಟಿ ನೀಡಿ ಮತದಾನದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಇಂದಿರಾ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಯುನಿಸೆಫ್ ಜಿಲ್ಲಾ ಸಂಯೋಜಕ ರಾಘವೇಂದ್ರ ಭಟ್, ಜನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸದಾನಂದ ಪೂಜಾರ್, ತಾಲೂಕು ಲೋಕ ಶಿಕ್ಷಣ ಸಮಿತಿ ಸಂಯೋಜಕ ಎಂ. ಗಿರಿಯಪ್ಪ, ಭಾರತಿ, ಸುಧಾರಾಣಿ, ಗ್ರಾಪಂ ಕಾರ್ಯದರ್ಶಿ ಮಹಾಂತೇಶ್ ಇದ್ದರು.