ದೇವದುರ್ಗ: ಕಾಂಗ್ರೆಸ್ ಪರ ಅಲೆ- ವಿಶ್ವಾಸ
ದೇವದುರ್ಗ: ತಾಲೂಕಿನ ಮತದಾರರು ಈ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಲುವು ತಾಳಲಿದ್ದಾರೆ. ಕ್ಷೇತ್ರದಲ್ಲಿ ಬದಲಾವಣೆಯ ಗಾಳಿ ಬೀಸಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎ. ವೆಂಕಟೇಶ್ ನಾಯಕ ಹೇಳಿದರು. ತಾಲೂಕಿನ ಮಿಯ್ಯಾಪುರ ಮತ್ತು ಚಿಂತಲಕುಂಟಾ ಗ್ರಾಮದಲ್ಲಿ ಇತ್ತೀಚೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಸ್ಥಳೀಯ ಶಾಸಕರು 45 ಸಾವಿರ ಮನೆಗಳನ್ನು ಬಡವರಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಅರ್ಹರಿಗೆ ಮನೆಗಳು ಹಂಚಿಕೆಯಾಗಿಲ್ಲ ಎಂದು ಆರೋಪಿಸಿದರು.