ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಎಸ್ಸೆಸ್ಸೆಲ್ಸಿ, ಪಿಯುಸಿ ನಂತರ ಮುಂದೇನು?

Rashmi Kasaragodu
Updated On : 27 Apr 2013, 11:12 am

ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ವಿಷಯದ ಕುರಿತು ನಗರದಲ್ಲಿ ಏ. 28 ರಂದು ವಿದ್ಯಾರ್ಥಿಗಳಿಗೆ ಉಚಿತ ಮಾಹಿತಿ ನೀಡಿಕೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಶ್ರೀಕೃಷ್ಣ ಅಕಾಡೆಮಿ ಮುಖ್ಯಸ್ಥ ನಿಮ್ಮಲಪುಡಿ ಮಧು ತಿಳಿಸಿದರು.
ಅವರು ನಗರದಲ್ಲಿ ಶುಕ್ರವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆಯ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ದ್ವಿತೀಯ ವರ್ಷದ ನಂತರದಲ್ಲಿ ಮುಂದಿನ ಆಯ್ಕೆಯೇನು ಎಂಬ ವಿಷಯದ ಬಗ್ಗೆ ಗೊಂದಲ ಮೂಡುವುದು ಸಹಜ. ಅದರ ನಿವಾರಣೆಗೆ ಈ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ ಎಂದು ಹೇಳಿದರು.
ನಿರಂತರ ಶ್ರಮ: ಈ ಕಾರ್ಯಾಗಾರದ್ಲಲಿ ಎಲ್ಲ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಐಐಟಿ ಮತ್ತಿತರೆ ಪ್ರತಿಷ್ಠಿತ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಂದ ರೂಪಿಸಿದ ಪಠ್ಯಕ್ರಮದ ಬೋಧನೆ ಮೂಲಕ ಅಸಾಧ್ಯವಾದುದನ್ನು ಸಾಧಿಸಬಹುದು. ಈ ನಿಟ್ಟಿನಲ್ಲಿ ಶ್ರೀಕೃಷ್ಣ ಅಕಾಡೆಮಿ ನಿರಂತರವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಸಜ್ಜು: ಶ್ರೀಕೃಷ್ಣ ಅಕಾಡೆಮಿಯು ಇದುವರೆಗೆ ಕೇವಲ ಪಿಯುಸಿ ವಿಜ್ಞಾನ ಕಾಲೇಜು ಹೊಂದಿತ್ತು. ಪ್ರಸಕ್ತ ವರ್ಷದಿಂದ ವಾಣಿಜ್ಯ ಪಿಯುಸಿ ಕೋರ್ಸ್ ಆರಂಭಿಸುತ್ತಿದ್ದು, ಪಿಯುಸಿ ವಿಜ್ಞಾನ ಮತ್ತು ವಾಣಿಜ್ಯ ವಿಷಯದ ಬೋಧನೆ ಜತೆಗೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಅಕಾಡೆಮಿ ಸಜ್ಜುಗೊಳಿಸುತ್ತಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ವಿವಿಧೆಡೆಯಿಂದ ಆಗಮಿಸುವ ಶಿಕ್ಷಣ ತಜ್ಞರು ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ಆಯ್ಕೆಯಲ್ಲಿ ನೆರವಾಗುವಂತೆ ಮಾಹಿತಿ ನೀಡಲಿದ್ದಾರೆ. ಪಾಲಕರು ತಮ್ಮ ಮಕ್ಕಳ ವಿಷಯ ಗ್ರಹಿಸುವ ಸಾಮರ್ಥ್ಯ ಅರಿತು ಮುಂದಿನ ದಿನಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕಾದ ಕೋರ್ಸ್ ಗೆ ಸೇರಿಸುವುದು ಸೂಕ್ತ. ತಪ್ಪಿದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದುಷ್ಪರಿಣಾಮವಾಗುವ ಸಾಧ್ಯತೆಯಿರುತ್ತದೆ ಎಂದು ಎಚ್ಚರಿಸಿದರು.
ಗೊಂದಲ ನಿವಾರಣೆ: ಈ ಹಿನ್ನೆಲೆಯಲ್ಲಿ ಮಕ್ಕಳಲ್ಲಿನ ಪ್ರತಿಭೆ ಅರಿಯಲು ಕಾರ್ಯಾಗಾರ ನೆರವಾಗಲಿದೆ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ನಂತರ ಮುಂದೇನು ಎಂಬ ಗೊಂದಲ ನಿವಾರಿಸಿಕೊಳ್ಳುವಂತೆ ಮನವಿ ಮಾಡಿದ ಅವರು, ಕಾರ್ಯಾಗಾರವು ಸಂಪೂರ್ಣ ಉಚಿತವಾಗಿರಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅಕಾಡೆಮಿಯ ಜಂಬಣ್ಣ, ಶ್ರೀಕೃಷ್ಣ ಕಾಲೇಜಿನ ಪ್ರಾಚಾರ್ಯ ಬಾಲಕೃಷ್ಣ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement