ಅಕ್ರಮ ಮದ್ಯ; ಸೆರೆ
ರಾಯಚೂರು: ಲಿಂಗಸ್ಗೂರು ತಾಲೂಕಿನ ಹುನಕುಂಟಿ ಗ್ರಾಮಕ್ಕೆ ಅಕ್ರಮವಾಗಿ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ಅಮರೇಶ ಎಂದು ಗುರುತಿಸಲಾಗಿದೆ. ಈತ ಚುನಾವಣೆಯಲ್ಲಿ ಮತದಾರರಿಗೆ ಹಂಚಿಕೆ ಮಾಡಲು ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ಅವನಿಂದ ಒಟ್ಟು 2,112 ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಲಿಂಗಸ್ಗೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಕ್ರಮ ಮದ್ಯ ಜಪ್ತಿ
ರಾಯಚೂರು: ಸಿಂಧನೂರು ತಾಲೂಕಿನ ಮುಕ್ಕುಂದಾ ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ಬಂಧಿತನನ್ನು ಯಂಕೋಬ ಎಂದು ಗುರುತಿಸಲಾಗಿದೆ. ಈತ ಮನೆ ಮುಂದೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಅವನಿಂದ 11,250 ಬೆಲೆಯ ಮದ್ಯ ಜಪ್ತಿ ಮಾಡಿದ್ದಾರೆ. ಸಿಂಧನೂರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತ; ಸಾವು
ರಾಯಚೂರು: ಸಿಂಧನೂರು ತಾಲೂಕಿನ ಸಿಂಧನೂರು- ರಾಯಚೂರು ರಸ್ತೆಯ ಗಾಳಿ ದುರುಗಮ್ಮ ದೇವಸ್ಥಾನದ ಬಳಿ ಬೈಕ್- ಲಾರಿ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಮೃತನನ್ನು ಮಹಾಂತೇಶ್ ಎಂದು ಗುರುತಿಸಲಾಗಿದೆ. ಈತ ಬೈಕ್ ನಿರ್ಲಕ್ಷ್ಯದಿಂದ ಓಡಿಸಿ ರಸ್ತೆ ಬದಿಗೆ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದರಿಂದ ತೀವ್ರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.