ಮತದಾನ : ಮದ್ಯ ಮಾರಾಟ ನಿಷೇಧ
ರಾಯಚೂರು: ಜಿಲ್ಲೆಯ ಎಲ್ಲ 7 ವಿಧಾನಸಭೆ ಕ್ಷೇತ್ರಗಳ ಚುನಾವಣೆಯ ಮತಗಳ ಎಣಿಕೆ ಕಾರ್ಯ ಮೇ 8 ರಂದು ನಗರದ ಎಲ್ ವಿಡಿ ಕಾಲೇಜಿನಲ್ಲಿ ನಡೆಯಲಿದ್ದು, ಕಾನೂನು ಸುವ್ಯವಸ್ಥೆ ಮತ್ತು ಸೌಹಾರ್ದತೆ ಕಾಪಾಡಲು ಮದ್ಯ ಮಾರಾಟ ನಿಷೇಧಿಸಲಾಗಿದೆ.
ಮೇ 7ರ ಬೆಳಗ್ಗೆ 6ರಿಂದ ಮೇರ ಮಧ್ಯರಾತ್ರಿವರೆಗೆ ಜಿಲ್ಲಾದ್ಯಂತ ಮದ್ಯದ ಚಿಲ್ಲರೆ ಮತ್ತು ಸಗಟು ಮಾರಾಟ ನಿಷೇಧಿಸಿದ್ದು, ಮದ್ಯ ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಚುನಾವಣೆಗಳು ಮುಕ್ತ, ನಿಷ್ಪಕ್ಷಪಾತ, ಶಾಂತಿಯುತವಾಗಿ ನಡೆಸಲು ಅನುಕೂಲವಾಗುವಂತೆ ಮೇ 3ರ ಬೆಳಗ್ಗೆ 6 ರಿಂದ ಮೇ 5ರ ಮಧ್ಯರಾತ್ರಿವರೆಗೆ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಘೋಷ್ ಆದೇಶಿಸಿದ್ದಾರೆಂದು ಜಿಲ್ಲಾಧಿಕಾರಿ ಕಚೇರಿ ತಿಳಿಸಿದೆ.