ಮುರಾರಿ ರೋಡ್ ಶೋ
ಮುದಗಲ್: ಲಿಂಗಸ್ಗೂರು ವಿಧಾನಸಭೆ ಮೀಸಲು ಕ್ಷೇತ್ರದ ಕೆಜೆಪಿ ಅಭ್ಯರ್ಥಿ ಎಚ್.ಬಿ. ಮುರಾರಿ ಇಂದು ಪಟ್ಟಣದಲ್ಲಿ ರೋಡ್ ಶೋ ಮೂಲಕ ಮತಯಾಚಿಸಿದರು.
ಪಟ್ಟಣದ ಲಿಂಗಸ್ಗೂರು ರಸ್ತೆಗೆ ಹೊಂದಿಕೊಂಡಿರುವ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತಮ್ಮ ರೋಡ್ ಶೋ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪಟ್ಟಣದ ಜಾಡರಪೇಟೆ, ರಾಯಚೂರು ಬೆಳಗಾಂವ ರಾಜ್ಯ ಹೆದ್ದಾರಿ, ಬಜಾರ ರಸ್ತೆ ಸೇರಿದಂತೆ ವಿವಿಧ ವಾರ್ಡ್ಗಳಲ್ಲಿ ತೆರಳಿ ರೋಡ್ ಶೋ ಮೂಲಕ ಮತಯಾಚಿಸಿದರು. ರೋಡ್ ಶೋ ಮತಯಾಚನೆಯಲ್ಲಿ ಪಪಂ ಮಾಜಿ ಅಧ್ಯಕ್ಷ ಗುಂಡಪ್ಪ ಜೀಡಿ, ದಲಿತ ಮುಖಂಡರಾದ ವೆಂಕಟೇಶ ಹಿರೇಮನಿ, ಮಲ್ಲಪ್ಪ ಕನ್ನಾಪುರಹಟ್ಟಿ, ಅನ್ನಿಸಬಾಬು ಕಲಂದರಿಯಾ, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.