ಇಂದು ಸಮಾರಂಭ
ಸಿಂಧನೂರು: ನಗರದ ಸೃಷ್ಟಿ ಸ್ವತಂತ್ರ ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ದ್ವಿತೀಯ ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ ಆ.2 ರಂದು ಏರ್ಪಡಿಸಲಾಗಿದೆ. ರೌಡಕುಂದಾದ ಮರಿಸಿದ್ದಲಿಂಗ ಶಿವಾಚಾರ್ಯರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್, ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ, ಶಹರ ಪೊಲೀಸ್ ಠಾಣೆಯ ಪಿಎಸ್ಐ ನಿಂಗಪ್ಪ, ವೆಂಕಟೇಶ್ವರ ಪ್ರೌಢಶಾಲೆ ಮು.ಗು. ಗಂಗನಗೌಡ ಪಾಲ್ಗೊಳ್ಳುವರು. ಪಗಡದಿನ್ನಿ ಸರ್ಕಾರಿ ಪ್ರೌಢಶಾಲೆಯ ಮು.ಗು. ಗಿರಿಜಾ ವಿಶೇಷ ಉಪನ್ಯಾಸ ನೀಡುವರು. ಕಾಲೇಜಿನ ಪ್ರಾಚಾರ್ಯ ಉಮೇಶ ಸಿದ್ರಾಂಪೂರ ಪ್ರಾಸ್ತಾವಿಕವಾಗಿ ಮಾತನಾಡುವರು. ಗೊಡಿನಾಳ ಪ್ರಾಥಮಿಕ ಶಾಲೆಯ ಮು.ಗು. ರಾಜಶೇಖರ ನಾಯಕ ಅವರಿಂದ ಪವಾಡ ಬಯಲು ಕಾರ್ಯಕ್ರಮ ಜರುಗುವುದು. ದ್ವಿತೀಯ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಸೂರಜ್ ಹೆಗಡೆ, ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಪ್ರದೀಪ ವಾಣಿಜ್ಯ, ಕಲಾ ವಿಭಾಗದ ವೆಂಕೋಬ, ಸಿದ್ರಾಮೇಶ ಅವರನ್ನು ಸನ್ಮಾನಿಸಲಾಗುವುದು.
ಇಂದು ಉದ್ಘಾಟನೆ
ರಾಯಚೂರು: ನಗರದ ಮಾಣಿಕಪ್ರಭು ಅಂಧ ಮಕ್ಕಳ ಶಾಲೆಯ ನೂತನ ಕಟ್ಟಡದ ಉದ್ಘಾಟನೆ ಸಮಾರಂಭ ಆ.2ರಂದು ನಡೆಯಲಿದೆ. ಬೆಳಗ್ಗೆ 11.30ಕ್ಕೆ ಕಟ್ಟಡವನ್ನು ಜಿಲ್ಲಾಧಿಕಾರಿ ನಾಗರಾಜು ಉದ್ಘಾಟಿಸಲಿದ್ದಾರೆ. ಸಾನ್ನಿಧ್ಯವನ್ನು ಆನಂದರಾಜ್ ಮಾಣಿಕಪ್ರಭು ವಹಿಸುವರು. ಅಧ್ಯಕ್ಷತೆಯನ್ನು ಕಿಶನ್ ಗೋಪಾಲ್ ವಹಿಸುವರು. ಸಣ್ಣ ಫಕೀರಪ್ಪ, ಶಾಸಕ ಡಾ. ಶಿವರಾಜ್ ಪಾಟೀಲ್ ಪಾಲ್ಗೊಳ್ಳಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.