9ರಂದು ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭ
ರಾಯಚೂರು: ಪ್ರಸಕ್ತ ಸಾಲಿನ ಕನ್ನಡ ಮಾಧ್ಯಮ ಪ್ರಶಸ್ತಿ ಪ್ರದಾನ ಸಮಾರಂಭವು ಆ.9ರಂದು ನಡೆಯಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ತಿಳಿಸಿದೆ.
ಅಂದು ಆಂಧ್ರದ ಮಹೆಬೂಬ್ ನಗರ ಜಿಲ್ಲೆಯ ಕೃಷ್ಣಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೆಳಗ್ಗೆ 10.30ಕ್ಕೆ ಹೊರರಾಜ್ಯ ಆಂಧ್ರಪ್ರದೇಶದ ವಿದ್ಯಾರ್ಥಿಗಳಿಗೆ ಕನ್ನಡ ಮಾಧ್ಯಮ ಪ್ರಶಸ್ತಿ ವಿತರಣೆ ಮಾಡಲಾಗುತ್ತಿದ್ದು, ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಪಾಲ್ಗೊಳ್ಳಲಿದ್ದಾರೆ. ಆಂಧ್ರ ಪ್ರದೇಶದ ಮಾಹಿತಿ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವೆ ಡಿ.ಕೆ. ಅರುಣಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಮಕ್ತಲ್ ಶಾಸಕ ಕೆ. ದಯಾಕರರೆಡ್ಡಿ ವಹಿಸಲಿದ್ದಾರೆ. ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು, ಗಣ್ಯರು ಪಾಲ್ಗೊಳ್ಳಲಿದ್ಗಾರೆಂದು ತಿಳಿಸಿದೆ.