ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಕ್ರೀಡೆಯಿಂದ ದೈಹಿಕ ಸಾಮರ್ಥ್ಯ ವೃದ್ಧಿ

Vishwanath S
Updated On : 9 Aug 2013, 11:52 am

ಕನ್ನಡಪ್ರಭ ವಾರ್ತೆ ,  ಸಿಂಧನೂರು ,  ಆ.8
ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವುದರ ಜೊತೆಗೆ ಮಾನಸಿಕ ವಿಕಸನಕ್ಕೆ ದಾರಿ ಮಾಡಿಕೊಡುತ್ತವೆ ಎಂದು ದೈಹಿಕ ಶಿಕ್ಷಣಾಧಿಕಾರಿ ಎನ್.ಬಿ. ಕರಂಡಿ ತಿಳಿಸಿದರು.
ತಾಲೂಕಿನ ಅಂಬಾಮಠದ ಸರ್ಕಾರಿ ಪ್ರೌಢಶಾಲೆ ಗೊರೇಬಾಳ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ದೈಹಿಕ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು ಹೆಚ್ಚಿಸಿ ಕ್ರೀಡೆಗಳಲ್ಲಿ ತೊಡಗಿಕೊಳ್ಳುವಂತೆ ಪ್ರೇರೇಪಿಸಬೇಕೆಂದು ತಿಳಿಸಿದರು.
ತಾಪಂ ಸದಸ್ಯ ವೀರರಾಜು ಕ್ರೀಡಾ ಜ್ಯೋತಿ ಸ್ವಾಗತಿಸಿ ಮಾತನಾಡಿ, ಬೇರೆ ಬೇರೆ ಶಾಲೆಗಳಿಂದ ಬಂದ ಕ್ರೀಡಾಳುಗಳು ಸ್ಪರ್ಧಾ ಮನೋಭಾವದಿಂದ ಕ್ರೀಡೆಗಳಲ್ಲಿ ಭಾಗವಹಿಸಿದ್ದು, ಉತ್ತಮ ತಂಡಗಳನ್ನು ತಾಲೂಕು ಮಟ್ಟಕ್ಕೆ ಕಳುಹಿಸುವ ಗುರುತರ ಜವಾಬ್ದಾರಿ ತೀರ್ಪುಗಾರರ ಮೇಲಿದೆ ಎಂದು ಹೇಳಿದರು.
ಕ್ರೀಡೆ ಜೀವನದ ಅವಿಭಾಜ್ಯ ಅಂಗ: ಶಿಕ್ಷಕ ಸಂಗಮೇಶ ಕೋಟೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಉತ್ತಮ ಸಾಧನೆ ಮಾಡಿದ ಯಾವುದೇ ಕ್ರೀಡಾ ಪಟುವಿನ ಯಶಸ್ಸಿನ ಹಿಂದೆ ತುಂಬಾ ಶ್ರಮವಿರುತ್ತದೆ. ಕ್ರೀಡೆಗಳು ವಿದ್ಯಾರ್ಥಿಗಳ ಜೀವನದಲ್ಲಿ ಒಂದು ಅವಿಭಾಜ್ಯ ಅಂಗವಾಗಬೇಕು. ಪ್ರತಿಯೊಬ್ಬ ಕ್ರೀಡಾಪಟುಗಳು ದಿನವಿಡೀ ಅಭ್ಯಾಸ ಮಾಡಿದಾಗ ಮಾತ್ರ ಯಶಸ್ಸು ಗಳಿಸಲು ಸಾಧ್ಯ ಎಂದು ಹೇಳಿದರು.
ಈ ವೇಳೆ ಸೋಮಲಾಪುರ ಗ್ರಾಪಂ ಅಧ್ಯಕ್ಷ ಎಂ.ವೀರರಾಜು, ಸದಸ್ಯ ಅಂಬಣ್ಣ ಅಂಬಾಮಠ, ಶಿಕ್ಷಣ ಪ್ರೇಮಿ ಡಾ. ರಾಚಪ್ಪ ಸಿಂಧೆ, ವೆಂಕಟೇಶ್ವರ ಕ್ಯಾಂಪ್ ವಲಯದ ಸಿಆರ್‌ಪಿ ಪಂಪಾಪತಿ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಾಗರಾಜ ಮತ್ತಿಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಲಕ್ಷ್ಮೀ ಕಟ್ಟಿ ಪ್ರಾರ್ಥಿಸಿದರು. ಮುಮ್ತಾಜ್ ಬೇಗಂ ಸ್ವಾಗತಿಸಿದರು. ಪರಿಮಳ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement