ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗಲಗ; ದರ್ಗಾ ಕಾಮಗಾರಿಗೆ ಭೂಮಿ ಪೂಜೆ

Vishwanath S
Updated On : 10 Aug 2013, 12:10 pm

ದೇವದುರ್ಗ: ಶಾಸಕರ ಅನುದಾನದಲ್ಲಿ ಮೂಲ ಸೌಲಭ್ಯ ಒದಗಿಸಲು ಆದ್ಯತೆ ನೀಡುವುದರ ಜತೆಗೆ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುತ್ತದೆ ಎಂದು ಜಿಪಂ ಮಾಜಿ ಸದಸ್ಯ ರಾಜಶೇಖರ ನಾಯಕ ಹೇಳಿದರು.
ತಾಲೂಕಿನ ಗಲಗ ಗ್ರಾಮದಲ್ಲಿ ಮಹಿಬೂಬ್ ಸುಬಾನಿ ದರ್ಗಾ ನಿರ್ಮಾಣಕ್ಕೆ ಶಾಸಕರ ಅನುದಾನದಲ್ಲಿ 5 ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ತಾಲೂಕಿನಲ್ಲಿ ಕುಡಿಯುವ ನೀರು, ರಸ್ತೆ ಸೇರಿ ಎಲ್ಲ ಗ್ರಾಮಗಳಿಗೆ ಮೂಲ ಸೌಲಭ್ಯ ಕಲ್ಪಿಸಲಾಗುತ್ತದೆ. ಆದರೆ ಅದಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶರಣಗೌಡ, ರಾಚಣ್ಣ ಅಬಕಾರಿ ಗಣೇಕಲ್, ನಾಗಪ್ಪ ಪಾಮರತಿ, ಸೈಯ್ಯದ್ ಅಪ್ಸರ್, ರೆಹಮಾನ್, ಚಂದ್ರಪ್ಪ ಪೂಜಾರಿ, ಅಯ್ಯನಗೌಡ, ಮಕ್ತುಂ ಸಾಬ್, ರವಿ ಪತ್ತಾರ, ಬಸವರಾಜ ಅರಕೇರಾ, ದೇವಣ್ಣ ನಾಯಕ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement