ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ: ನಾಯಕ

Vishwanath S
Updated On : 10 Aug 2013, 12:09 pm

ದೇವದುರ್ಗ: ಮಕ್ಕಳ ವಿದ್ಯಾಭ್ಯಾಸದ ಜತೆಗೆ ದೈಹಿಕ ಬೆಳವಣಿಗೆಗಾಗಿ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಅವಶ್ಯ. ವಿದ್ಯಾರ್ಥಿಗಳು ಸೋಲು, ಗೆಲವು ಎನ್ನದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕೆಂದು ಮಾಜಿ ಜಿಪಂ ಸದಸ್ಯ ರಾಜಶೇಖರ ನಾಯಕ ಹೇಳಿದರು.
ತಾಲೂಕಿನ ಬಿ.ಗಣೇಕಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅರಕೇರಾ ಹೋಬಳಿ ವಲಯದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯನ್ನು ಮೈಗೂಡಿಸಿಕೊಳ್ಳುವುದರಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ ಎಂದರು. ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹನುಮಂತ್ರಾಯ ಶಾಖೆ, ಶರಣಗೌಡ, ರಾಚಣ್ಣ ಅಬಕಾರಿ, ಸಿ.ಎಸ್. ಸಿಂಧೆ, ಮಲ್ಲಯ್ಯ ಸೇರಿ ಅನೇಕರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement