ಶ್ರಮಿಕರ ಭವನ ಉದ್ಘಾಟನೆ
ಕನ್ನಡಪ್ರಭ ವಾರ್ತೆ , ರಾಯಚೂರು , ಆ.9
ನಗರದ ಎಪಿಎಂಸಿ ಆವರಣದಲ್ಲಿ ಹಮಾಲರ ವಿಶ್ರಾಂತಿಗಾಗಿ ನಿರ್ಮಿಸಿದ ಶ್ರಮಿಕರ ಭವನದ ಉದ್ಘಾಟನೆ ಸಮಾರಂಭ ಶುಕ್ರವಾರ ಆಯೋಜಿಸಲಾಗಿತ್ತು.
ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಶ್ರಮಿಕ ಭವನ ಉದ್ಘಾಟಿಸಿ ಮಾತನಾಡಿ, ಹಮಾಲರು ಶ್ರಮಜೀವಿಗಳಾಗಿದ್ದು ಅವರ ಜೀವನ ಸುಗಮವಾಗಿ ಸಾಗುವಂತೆ ನೋಡಿಕೊಳ್ಳುವುದು ಎಲ್ಲರ ಹೊಣೆಯಾಗಿದೆ. ಸರ್ಕಾರದ ಯೋಜನೆಗಳ ಲಾಭ ಹಮಾಲರಿಗೆ ತಲುಪಬೇಕಿದೆ ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಗ್ರಾಮೀಣ ಶಾಸಕ ತಿಪ್ಪರಾಜು ಹವಾಲ್ದಾರ್ ಪಾಲ್ಗೊಂಡು ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾರ್ಕೆಟ್ ಯಾರ್ಡ್ ಪಿಎಸ್ಐ ಬೇಬಿ ವಾಲಿಕಾರ್, ಹಮಾಲರ ಸಂಘದ ಅಧ್ಯಕ್ಷ ಪ್ರಹ್ಲಾದರೆಡ್ಡಿ, ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಹಮಾಲರ ಸಂಘದ ಜಿಲ್ಲಾ ಕಾರ್ಯದರ್ಶಿ ಯಂಕಪ್ಪ ಕೆಂಗಲ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.