ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗಂಗಾಮತ ಸಮಾಜ ಪ.ಪಂಗಡಕ್ಕೆ ಸೇರ್ಪಡೆಗೆ ಪ್ರಸ್ತಾವನೆ: ಸಚಿವ

Srinivasa Murthy VN
Updated On : 13 Aug 2013, 10:17 am

ಸಿಂಧನೂರು: ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿರುವ ಗಂಗಾಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ಹಂಪಿ ವಿಶ್ವವಿದ್ಯಾಲಯದ ವರದಿಗಾಗಿ ಕಾಯುತ್ತಿದ್ದೇವೆ. ವರದಿ ಬಂದ ನಂತರ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಾಗಿ ಜವಳಿ ಖಾತೆ ಸಚಿವ ಬಾಬುರಾವ್ ಚಿಂಚನಸೂರು ಹೇಳಿದರು.
ಗುಲ್ಬರ್ಗದಿಂದ ಹೊಸಪೇಟೆಗೆ ಹೊರಟಿದ್ದ ಅವರು, ಗಂಗಾಮತ ಸಮಾಜದ ರಾಜ್ಯ ಉಪಾಧ್ಯಕ್ಷ ಎಸ್. ನಾಗರಾಜ ವಕೀಲರ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಕೇಂದ್ರದಲ್ಲಿ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಮಾಡಿ ಶೋಷಿತ ಗಂಗಾಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ವಿನಂತಿಸುತ್ತೇನೆ ಎಂದರು.
ಯಮದೂತರು ಬಂದು ನನ್ನನ್ನು ಕರೆದೊಯ್ಯಲು ಪ್ರಯತ್ನಿಸಿದರೂ ಗಂಗಾಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಿ ಬರುತ್ತೇನೆಂದು ಪ್ರಾರ್ಥಿಸುತ್ತೇನೆ ಎಂದು ಹೇಳುವ ಮೂಲಕ ಸಚಿವರು ಕಾರ್ಯಕರ್ತರನ್ನು ಮತ್ತು ಸಮಾಜದ ಬಂಧುಗಳನ್ನು ನಗೆಗಡಲಲ್ಲಿ ತೇಲಿಸಿದರು. ಮುಂದುವರೆದು ಮಾತನಾಡಿ, ಗಂಗಾಮತದಲ್ಲಿ ಜನಿಸಿರುವ ನಾನು ಸಮಾಜದ ಋಣ ತೀರಿಸುತ್ತೇನೆಂದು ಹೇಳುತ್ತಾ ಭಾವುಕರಾದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement