ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ: ಶಾಸಕ ಪಾಟೀಲ್

Srinivasa Murthy VN
Updated On : 13 Aug 2013, 10:17 am

ರಾಯಚೂರು: ಕಠಿಣ ಪರಿಶ್ರಮ ಹಾಗೂ ನಿರಂತರ ಅಧ್ಯಯನದಿಂದ ಮಾತ್ರ ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಹೇಳಿದರು.
ನಗರದ ನವೋದಯ ಮೆಡಿಕಲ್ ಕಾಲೇಜಿನಲ್ಲಿ ಸೋಮವಾರ ಎಂಬಿಬಿಎಸ್, ಡೆಂಟಲ್ ಕೋರ್ಸಿನ ಪ್ರಥಮ ವರ್ಷದ ತರಗತಿಗಳಿಗೆ ಚಾಲನೆ ನೀಡಿ, ವೈದ್ಯಕೀಯ ವೃತ್ತಿಗೆ ಸಮಾಜದಲ್ಲಿ ಗೌರವದ ಸ್ಥಾನವಿದೆ. ಇಂಥ ವೃತ್ತಿಯ ಕಲಿಕೆಯಲ್ಲಿರುವ ವಿದ್ಯಾರ್ಥಿಗಳು ಪ್ರಾಮಾಣಿಕತೆ ಮೆರೆಯಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ನಿರಂತರ ಹಾಗೂ ಕಠಿಣ ಪರಿಶ್ರಮದಿಂದ ಅಧ್ಯಯನ ಮಾಡಿದಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಅದರಲ್ಲೂ ಎಂಬಿಬಿಎಸ್ ಕೋರ್ಸ್‌ಗೆ ಪ್ರವೇಶ ಪಡೆದವರು ನಿರ್ದಿಷ್ಟ ಗುರಿಯೊಂದಿಗೆ ಅಧ್ಯಯನ ಮಾಡುವುದು ಅವಶ್ಯಕ. ಪಠ್ಯಕ್ರಮದ ಬಗ್ಗೆ ಭೀತಿಗೊಳಗಾಗದೇ ವ್ಯಾಸಂಗ ಮಾಡುವಂತೆ ಮನವಿ ಮಾಡಿದರು.
ಅಧ್ಯಯನ ಅಗತ್ಯ: ನವೋದಯ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎಸ್.ಆರ್. ರೆಡ್ಡಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಷ್ಟಪಟ್ಟು ವ್ಯಾಸಂಗ ಮಾಡದೇ ಆಸಕ್ತಿಯಿಂದ ಕಲಿಕೆಗೆ ತೊಡಗಿದರೆ ಸಾಧನೆ ಮಾಡುವುದು ಕಷ್ಟವೇನಲ್ಲ. ಇಷ್ಟಪಟ್ಟು ಅಧ್ಯಯನ ಮಾಡುವ ಪ್ರವೃತ್ತಿ ವಿದ್ಯಾರ್ಥಿಗಳು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಫುಡ್‌ಕೋರ್ಟ್ ಉದ್ದೇಶ: ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಪ್ರಾಮಾಣಿಕತೆ ರೂಢಿಸಿಕೊಳ್ಳಬೇಕು. ಅದರಿಂದ ಮಾತ್ರ ವೈದ್ಯಕೀಯ ಶಿಕ್ಷಣವನ್ನು ನಿಗದಿತ ಅವಧಿಯಲ್ಲಿ ಮುಗಿಸಲು ಸಾಧ್ಯ. ನವೋದಯ ಶಿಕ್ಷಣ ಸಂಸ್ಥೆಯು ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕೆ ಶೀಘ್ರದಲ್ಲೇ ಫುಡ್‌ಕೋರ್ಟ್ ನಿರ್ಮಿಸುವ ಉದ್ದೇಶವಿದೆ ಎಂದರು. ಕಾಲೇಜಿನ ರಿಜಿಸ್ಟ್ರಾರ್ ಡಾ. ಶ್ರೀನಿವಾಸ್, ವೈದ್ಯಕೀಯ ಕಾಲೇಜಿನ ನಿರ್ದೇಶಕ ಡಾ.ಎಸ್. ಆರ್. ಹೆಗಡೆ, ಪ್ರಾಚಾರ್ಯ ಪ್ರಕಾಶ್ ಪಾಟೀಲ್ ಸೇರಿ ಅನೇಕರಿದ್ದರು. ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement