ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಸ್ವಾತಂತ್ರೋತ್ಸವ ಆಚರಣೆ ನಾಳೆ

Lingaraj Badiger
Updated On : 14 Aug 2013, 11:10 am

ರಾಯಚೂರು: ಸ್ವಾತಂತ್ರ್ಯೋತ್ಸವ ಹಾಗೂ ಸಾಕ್ಷರತಾ ದಿನಾಚರಣೆ ಅಂಗವಾಗಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಕಚೇರಿಯಲ್ಲಿ ಆ.15ರಂದು ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಬೆಳಗ್ಗೆ 8.30ಕ್ಕೆ ಜಿಪಂ ಹಾಗೂ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಅಧ್ಯಕ್ಷೆ ಲಲಿತಮ್ಮ ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹಾಗೂ ಸದಸ್ಯ ಕಾರ್ಯದಶಿಗಳು ಜಿಲ್ಲಾ ಲೋಕ ಶಿಕ್ಷಣ ಸಮಿತಿ ರಾಯಚೂರು ಇವರ ಕಚೇರಿಯ ಪ್ರಕಟಣೆ ತಿಳಿಸಿದೆ.
ಜಿಪಂ ಕಚೇರಿಯಲ್ಲಿ
ಸ್ವಾತಂತ್ರೋತ್ಸವ
ರಾಯಚೂರು: ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಸ್ಥಳೀಯ ಜಿಪಂ ನಲ್ಲಿ ಆ.15ರಂದು ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮ ಆಯೋಜಿಸಲಾಗಿದೆ.ಅಂದು ಬೆಳಗ್ಗೆ 8ಕ್ಕೆ ಜಿಪಂ ಅಧ್ಯಕ್ಷೆ ಲಲಿತಮ್ಮ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸುವರು ಎಂದು ಜಿಲ್ಲಾ ಪಂಚಾಯ್ತಿ ಪ್ರಕಟಣೆ ತಿಳಿಸಿದೆ.
16ಕ್ಕೆ ಜಿಪಂ ಸಭೆ
ರಾಯಚೂರು: ಇಲ್ಲಿನ ಜಿಲ್ಲಾ ಪಂಚಾಯಿತಿಯ ಮಾಸಿಕ ಕೆಡಿಪಿ ಸಭೆ ಆ.16ರಂದು ಕರೆಯಲಾಗಿದೆ ಎಂದು ಜಿಪಂ ತಿಳಿಸಿದೆ.ಅಂದು ಜಿಪಂ ಸಭಾಂಗಣದಲ್ಲಿ ಬೆಳಗ್ಗೆ 11ಕ್ಕೆ ಜಿಪಂ ಅಧ್ಯಕ್ಷೆ ಲಲಿತಮ್ಮ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು ಎಲ್ಲ ಅಧಿಕಾರಿಗಳು ಪ್ರಗತಿಯ ಮಾಹಿತಿಯೊಂದಿಗೆ ಸಭೆಗೆ ಹಾಜರಾಗಲು ಸೂಚಿಸಿದೆ.
ಅಪರಿಚಿತ ಶವ ಪತ್ತೆ
ರಾಯಚೂರು: ತಾಲೂಕಿನ ರಾಯಚೂರು-ಮರ್ಚಟ್ಹಾಳ ರೇಲ್ವೆ ನಿಲ್ದಾಣದ ಮಧ್ಯೆ ಚಲಿಸುವ ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆಯ ಶವ ಪತ್ತೆಯಾಗಿದೆ. ಸುಮಾರು 20ವರ್ಷ ವಯಸ್ಸಿನ ಮಹಿಳೆಯು ರೈಲಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ರೇಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಳೆ ಮಾರ್ಕೆಟ್ ಬಂದ್
ರಾಯಚೂರು: ಇಲ್ಲಿನ ಉಸ್ಮಾನಿಯಾ ತರಕಾರಿ ಮಾರಾಟಗಾರರ ಸಂಘದಿಂದ ಆ.15ರಂದು ಸ್ವಾತಂತ್ರೋತ್ಸವ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ15ರಂದು ತರಕಾರಿ ಮಾರುಕಟ್ಟೆ ಬಂದ್ ಮಾಡಲಾಗುತ್ತದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement