ನಾಳೆ ರೈತ ಸಂಘದ ಪೂರ್ವಭಾವಿ ಸಭೆ
ಲಿಂಗಸ್ಗೂರು: ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ಆ.19 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕ ರಾಜ್ಯ ರೈತ ಸಂಘದಿಂದ ರೈತರ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸಂಘದ ರಾಜ್ಯ ಕಾರ್ಯದರ್ಶಿ ಅಮರಣ್ಣ ಗುಡಿಹಾಳ ಪತ್ರಿಕಾ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.
ಮಸ್ಕಿ ಗ್ರಾಮಕ್ಕೆ ಆ. 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದಾರೆ. ಅಂದು ಜಿಲ್ಲೆಯ ರೈತರ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಮನವಿ ಸಲ್ಲಿಸಲಾಗುವುದು. ಪ್ರಯುಕ್ತ ಆ.19 ರಂದು ಲಿಂಗಸ್ಗೂರು ಪಟ್ಟಣದ ಈಶ್ವರ ದೇವಸ್ಥಾನದಲ್ಲಿ ರೈತ ಸಂಘದ ಪ್ರಮುಖ ಕಾರ್ಯಕರ್ತರು ಹಾಗೂ ರೈತರ ಸಭೆ ಸೇರಿ ನಂದವಾಡಗಿ ಏತ ನೀರಾವರಿ ಪೂರ್ಣ ಪ್ರಮಾಣದಲ್ಲಿ ಯೋಜನೆ ಜಾರಿಗೊಳಿಸುವುದು. ಬೀಜ-ಗೊಬ್ಬರ ಹಾಗೂ ಕೃಷಿ ಸಲಕರಣೆಗಳ ಪೂರೈಕೆ ಸೇರಿದಂತೆ ಅನೇಕ ವಿಷಯಗಳ ಕುರಿತು ಚರ್ಚಿಸಲಾಗುವುದು.