ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಮಿಟ್ಟಿಕೆಲ್ಲೂರು; ಸಹ ಶಿಕ್ಷಕರ ವಿರುದ್ಧ ಕ್ರಮಕ್ಕೆ ಆಗ್ರಹ

Mainashree
Updated On : 18 Aug 2013, 11:01 am

ಲಿಂಗಸ್ಗೂರು: ತಾಲೂಕಿನ ಮಿಟ್ಟಿಕೆಲ್ಲೂರು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಸ್‌ಡಿಎಂಸಿ ಅಧ್ಯಕ್ಷ ಹನುಮಂತ ಶನಿವಾರ ತಹಸೀಲ್ದಾರ್‌ರಿಗೆ ಮನವಿ ಸಲ್ಲಿಸಿದರು. ಗ್ರಾಮದ ಶಾಲೆಯ ಸಹಶಿಕ್ಷಕ ಅಶೋಕ ಎಂಬುವರು ಕಳೆದ ಸುಮಾರು 10-12 ವರ್ಷದಿಂದ ಬೇಜವಬ್ದಾರಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಶಾಲೆಯಲ್ಲಿ ಸಮಯಕ್ಕೆ ಸರಿಯಾಗಿ ಪಾಠ ಮಾಡದೆ ಅನಧಿಕೃತವಾಗಿ ಗೈರು ಹಾಜರಾಗುತ್ತಾರೆ. ಇದರಿಂದ ನಿಗದಿತ ಸಮಯದೊಳಗೆ ಪಾಠ ಮುಗಿಸದ ಕಾರಣ ಮಕ್ಕಳ ಶಿಕ್ಷಣಕ್ಕೆ ಹಿನ್ನೆಡೆಯಾಗುತ್ತಿದೆ. ಆದ್ದರಿಂದ ಸಹಶಿಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. ಮುಖಂಡರಾದ ಆರ್ಚಪ್ಪ ಮುದಬಾಳ, ಬಸವರಾಜ ಕುಣಿಕಲ್ಲೂರ, ಚನ್ನಬಸವ ಕುಣಿಕಲ್ಲೂರ, ಗುಡದಪ್ಪ ಕುಣಿಕಲ್ಲೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement