ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪಕ್ಷ ಸಂಘಟನೆಗೆ ಎಲ್ಲರ ವಿಶ್ವಾಸ ಗಳಿಸುವುದು ಅಗತ್ಯ

Rashmi Kasaragodu
Updated On : 19 Aug 2013, 11:57 am

ಕ.ಪ್ರ.ವಾರ್ತೆ, ಲಿಂಗಸ್ಗೂರು ಆ.18
ಕಾಂಗ್ರೆಸ್ ಸಂಘಟನೆಗೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಲಿಂಗಸ್ಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಭೂಪನಗೌಡ ಕರಡಕಲ್ ಅವರು ಶ್ರಮಿಸಲಿದ್ದಾರೆಂಬ ವಿಶ್ವಾಸ ಹೊಂದಿರುವುದಾಗಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪುರ ತಿಳಿಸಿದರು.
ಪಟ್ಟಣದಲ್ಲಿ ಭಾನುವಾರ ಕಾಂಗ್ರೆಸ್ನ ನೂತನ ಕಾರ್ಯಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ,  ಲಿಂಗಸ್ಗೂರು ಕ್ಷೇತ್ರದ ವಿಧಾನಸಭೆ ಚುನಾವಣೆ ಫಲಿತಾಂಶ ಗಮನಿಸಿದಾಗ ಕಳೆದ ಸುಮಾರು 23 ವರ್ಷದಿಂದ ಕಾಂಗ್ರೆಸ್ ಅಧಿಕಾರದಿಂದ ವಂಚಿಗೊಂಡಿದ್ದರೂ, ತನ್ನ ಅಸ್ಥಿತ್ವ ಉಳಿಸಿಕೊಂಡಿದ್ದು, ಅಲ್ಪ ಮತಗಳಲ್ಲಿ ಪರಾಭವಗೊಂಡಿರುತ್ತದೆ. ಮುಂಬರುವ ಲೋಕಸಭಾ ಸೇರಿದಂತೆ ಎಲ್ಲ ಚುನಾವಣೆಗಳಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯ ಮೆರೆಯಲು ಇನ್ನು ಸಂಘಟನೆ ಮಾಡುವುದು ಅವಶ್ಯವಾಗಿದೆ.
ಈ ನಿಟ್ಟಿನಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷ ಭೂಪನಗೌಡ ಕರಡಕಲ್ ಅವರು ಪಕ್ಷದ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸಲಿದ್ದಾರೆಂಬ ವಿಶ್ವಾಸವಿದೆ. ಬರುವ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಿಂದ ಸ್ಪರ್ಧಿಸಲು ತಾವು ಆಕಾಂಕ್ಷಿಯಾಗಿದ್ದು, ಈ ಕುರಿತು ರಾಜ್ಯ ಮತ್ತು ರಾಷ್ಟ್ರಮಟ್ಟದ ನಾಯಕರ ಗಮನಕ್ಕೆ ತರಲಾಗಿದೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ತಾವು ಬದ್ಧರಿರುವುದಾಗಿ ತಿಳಿಸಿದರು.
ಧ್ಯೇಯೋದ್ದೇಶ: ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ತಾಲೂಕಿನ ಕಾರ್ಯಾಲಯ ಉದ್ಘಾಟಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅನೇಕ ಜನಪರ ಮತ್ತು ರೈತಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಮುಖ್ಯಮಂತ್ರಿಗಳು ಸರ್ಕಾರದ ಧ್ಯೇಯೋದ್ದೇಶ ತೋರಿಸಿ ಕೊಟ್ಟಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬರುವ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಪಕ್ಷ ಸಂಘಟನೆಗೆ ಹೆಚ್ಚಿನ ಆಸಕ್ತಿವಹಿಸಿ ರಾಜ್ಯದಿಂದ 20-22 ಸ್ಥಾನ ಗೆಲ್ಲಿಸುವ ಮೂಲಕ ಕೇಂದ್ರದಲ್ಲಿ ಪುನಃ ಕಾಂಗ್ರೆಸ್ನು ಅಧಿಕಾರಕ್ಕೆ ತರುವಲ್ಲಿ ಗಮನ ಹರಿಸಬೇಕೆಂದು ಸಲಹೆ ನೀಡಿದರು.
ಪಕ್ಷ ಬಲವರ್ಧನೆ: ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷ ಭೂಪನಗೌಡ ಕರಡಕಲ್ ಮಾತನಾಡಿ, ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ, ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲ್ ಹಾಗೂ ಜಿಲ್ಲಾಧ್ಯಕ್ಷ ಎ. ವಸಂತ ಕುಮಾರ ಸೇರಿದಂತೆ ಹಿರಿಯ ನಾಯಕರ ನೇತೃತ್ವದಲ್ಲಿ  ಸಹಕಾರದೊಂದಿಗೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಎಲ್ಲ ವರ್ಗದ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬಲವರ್ಧನೆಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ಮುಖಂಡರಾದ ಡಿ.ಎಸ್. ಹೂಲಗೇರಿ, ಬಸವಂತರಾಯ ಕುರಿ, ಗುಂಡಪ್ಪ ನಾಯಕ, ವೀರನಗೌಡ ಐದನಾಳ, ಅಂದಾನಪ್ಪ ಗುಂಡಳ್ಳಿ, ಮುನ್ವರ್ ಖಾನ್, ಲಾಲ್ ಅಹ್ಮದ್ ಸಾಬ್, ಗುರುಪಾದಪ್ಪ ಹೊನ್ನಳ್ಳಿ, ಸೋಮಶೇಖರ ಐದನಾಳ, ಮುದುಕಪ್ಪ ವಕೀಲರು, ಚನ್ನಾರೆಡ್ಡಿ ಬಿರಾದಾರ, ನಾಗರಾಜ ತಿಪ್ಪಣ್ಣ, ಮಹಾಂತೇಶ ಪಾಟೀಲ, ಸಂಗಣ್ಣ ಬ್ಯಯಾಪೂರ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಇದ್ದರು. ಇದೇ ಸಂದರ್ಭದಲ್ಲಿ ಮಾಜಿ ಸಚಿವ ಅಮರೇಗೌಡ ಪಾಟೀಲ್ ಬಯ್ಯಾಪೂರ ಹಾಗೂ ಮಸ್ಕಿ ಶಾಸಕ ಪ್ರತಾಪಗೌಡ ಪಾಟೀಲರ ಸಮ್ಮುಖದಲ್ಲಿ ಜಿಪಂ ಮಾಜಿ ಅಧ್ಯಕ್ಷ ಹನುಮಂತಪ್ಪ ತೊಗರಿ, ಮುಖಂಡರಾದ ಮಲ್ಲಯ್ಯ ಸಾಹುಕಾರ, ಗದ್ದೆಪ್ಪ ಕಮಲದಿನ್ನಿ, ಮಹೇಶ ಹಿರೇಮಠ, ಹನುಮಂತ ಬಿಜ್ಜೂರ, ಯಂಕಪ್ಪ ಚಿತಾಪೂರ ಮತ್ತಿತರರು ಕಾಂಗ್ರೆಸ್ಗೆ ಸೇರ್ಪಡೆಗೊಂಡವರನ್ನು ಅಧ್ಯಕ್ಷ ಭೂಪನಗೌಡ ಕರಡಕಲ್ ಪಕ್ಷಕ್ಕೆ ಬರಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement