ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

Rashmi Kasaragodu
Updated On : 19 Aug 2013, 12:02 pm

ಯಾದಗಿರಿ: ಸ್ವಾತಂತ್ರ್ಯ ದಿನಾಚಾರಣೆಯ ನಿಮಿತ್ತ 2012- 13ನೇ ಸಾಲಿನಲ್ಲಿ ಎಸ್ಸೆಸ್ಸೆಲ್ಸಿಯಿಂದ ಉನ್ನತ ಪದವಿಯವರೆಗೆ ಉನ್ನತ ದರ್ಜೆಯಲ್ಲಿ ಉತ್ತೀರ್ಣರಾದ ಬಂಜಾರಾ ಸಮಾಜದ ವಿದ್ಯಾರ್ಥಿಗಳನ್ನು ಬಂಜಾರಾ ಸರ್ಕಾರಿ ಹಾಗೂ ಅರೆ ಸರ್ಕಾರಿ ನೌಕರರ ಸಂಘದ ವತಿಯಿಂದ ಸನ್ಮಾನಿಸಿ, ನೆನಪಿನ ಕಾಣಿಕೆ ನೀಡಲಾಯಿತು.
ನಗರದ ಬಂಜಾರ ನೌಕರರ ಸಂಘದ ಕಚೇರಿಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಮಾನಸಿಂಗ ಚವ್ಹಾಣ, ಪ್ರತಿಭೆಯನ್ನು ಗುರುತಿಸಿ ಬಂಜಾರಾ ವಿದ್ಯಾರ್ಥಿಗಳನ್ನು ಸನ್ಮಾನಿಸುತ್ತಿರುವುದು ಶ್ಲಾಘನಿಯ ಕಾರ್ಯ. ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಮುಂದೆ ಸಮಾಜಕ್ಕೆ ಆಧಾರಸ್ತಂಭವಾಗಬೇಕೆಂದು ಕರೆ ನೀಡಿದರು.ಪಾಂಡು ಎಲ್. ರಾಠೋಡ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಬಂಜಾರಾ ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ಶಿಕ್ಷಿತರಾಗಿ ಸರ್ಕಾರಿ ಸೌಲಭ್ಯಗಳನ್ನು ಪಡೆದು ಕತ್ತಲೆಯಿಂದ ಹೊರಬರಬೇಕೆಂದು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement