ಇಂದು ಡಿ.ದೇವರಾಜ ಅರಸು ಜನ್ಮದಿನಾಚರಣೆ
ಕ.ಪ್ರ.ವಾರ್ತ್ಣೆ ಗುಲ್ಬರ್ಗ್ಣ ಆ.19
ಗುಲ್ಬರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಗಳ ಆಶ್ರಯದಲ್ಲಿ ಆ.20ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ಡಿ.ದೇವರಾಜ ಅರಸು ಅವರ 98ನೇ ಜನ್ಮದಿನಾಚರಣೆ ಸಮಾರಂಭ ಆಯೋಜಿಸಲಾಗಿದೆ.
ಪೌರಾಡಳಿತ ಸಾರ್ವಜನಿಕ ಉದ್ಯಮಗಳು, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್, ಹಜ್ ಮತ್ತು ಗುಲ್ಬರ್ಗ ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಕಾರ್ಯಕ್ರಮ ಉದ್ಘಾಟಿಸುವರು. ಗುಲ್ಬರ್ಗ ದಕ್ಷಿಣ ಶಾಸಕ ದತ್ತಾತ್ರೇಯ ಸಿ.ಪಾಟೀಲ್ ರೇವೂರ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೇಂದ್ರ ರೇಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಸಂಸದ ಡಾ. ಎನ್. ಧರ್ಮಸಿಂಗ್, ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವ ಡಾ. ಶರಣಪ್ರಕಾಶ ಪಾಟೀಲ್, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಮತ್ತು ಜಿಲ್ಲಾ ಪಂಚಾಯತಿ ಅಧ್ಯಕ್ಷ ಶರಣಪ್ಪ ಪಾಟೀಲ್ ತೇಲ್ಕೂರ್ ಮುಖ್ಯ ಅತಿಥಿಗಳಾಗಿ ಆಗಮಿಸುವರು.
ಶಾಸಕರಾದ ಜಿ. ರಾಮಕೃಷ್ಣ, ಮಾಲೀಕಯ್ಯ ಗುತ್ತೇದಾರ, ಬಿ.ಆರ್. ಪಾಟೀಲ್, ಡಾ. ಉಮೇಶ ಜಾಧವ, ಡಾ. ಅಜಯಸಿಂಗ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ ಸದಸ್ಯರಾದ ಅಲ್ಲಂಪ್ರಭು ಪಾಟೀಲ್, ಅಮರನಾಥ ಪಾಟೀಲ್ ಮತ್ತು ಕೆ.ಬಿ. ಶಾಣಪ್ಪ ವಿಶೇಷ ಆಹ್ವಾನಿತರಾಗಿ ಆಗಮಿಸುವರು.