ಕೃಷಿ ಪ್ರಶಸ್ತಿ-ಅರ್ಜಿ ಆಹ್ವಾನ
ರಾಯಚೂರು: ಮುಂಗಾರು ಹಂಗಾಮಿಗಾಗಿ ಪ್ರಸಕ್ತ ಸಾಲಿಗಾಗಿ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಬೆಳೆಗಳಿಗೆ ನಿಗದಿಪಡಿಸಿದ ಪ್ರವೇಶ ಶುಲ್ಕವು ರಾಜ್ಯ ಮಟ್ಟದ ಸ್ಪರ್ಧೆಗೆ ರು. 300, ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ರು. 75, ಜಿಲ್ಲಾ ಮಟ್ಟಕ್ಕೆ ಸ್ಪರ್ಧೆಗೆ ರು. 150, ಪರಿಶಿಷ್ಟ ಜಾತಿ ಪಂಗಡದವರಿಗೆ ರು. 40, ತಾಲೂಕು ಮಟ್ಟ ಸ್ಪರ್ಧೆಗೆ ರು. 100, ಹಾಗೂ ಪರಿಶಿಷ್ಟ ಜಾತಿ ಪಂಗಡದವರಿಗೆ ರು. 25 ಪ್ರವೇಶ ಶುಲ್ಕ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸಲು ಆ. 30 ಕಡೆಯ ದಿನವಾಗಿದೆ. ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕರು ಹಾಗೂ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಲು ಕೋರಲಾಗಿದೆ.