ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಖಾತ್ರಿ: ಮೂವರ ಅಮಾನತು

Rashmi Kasaragodu
Updated On : 21 Aug 2013, 12:20 pm

ರಾಯಚೂರು: ದೇವದುರ್ಗ ತಾಲೂಕಿನ ಮುಷ್ಟೂರು ಗ್ರಾಪಂನಲ್ಲಿ 2012-13ನೇ ಸಾಲಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿ ನಿರ್ವಹಿಸದೆ ದಾಖಲೆ ಸೃಷ್ಟಿಸಿ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಮೇಲೆ ಮೂವರನ್ನು ಜಿಪಂ ಆಡಳಿತ ಅಮಾನತುಗೊಳಿಸಿದೆ. ಸಹಾಯಕ ಕೃಷಿ ಅಧಿಕಾರಿ ಎಸ್.ವಿ. ಉಪ್ಪಾರ, ಕಿರಿಯ ಅಭಿಯಂತರ ಸೈಯ್ಯದ್ ಅಶ್ರಫ್ ಹಾಗೂ ಗ್ರಾಪಂ ಪಿಡಿಒ ಪ್ರಭುಲಿಂಗ ಹಣ ದುರ್ಬಳಕೆ ಮಾಡಿಕೊಂಡಿದ್ದು ಮೇಲ್ನೋಟಕ್ಕೆ ಸಾಬೀತಾಗಿದ್ದು, ಇವರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಜಿಪಂ ಸಿಇಒ ಡಾ. ಮುದ್ದುಮೋಹನ್ ಸೇವೆಯಿಂದ ಅಮಾನತುಗೊಳಿಸಿದ ಆದೇಶ ಹೊರಡಿಸಿದ್ದಾರೆ.
ತೋಟಗಳ ಅಭಿವೃದ್ಧಿ ಯೋಜನೆಗೆ ಅರ್ಜಿ
ರಾಯಚೂರು: ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ಹೈ-ಕ ಗ್ರಾಮೀಣ ಪ್ರದೇಶದಲ್ಲಿ ಪೌಷ್ಠಿಕಾಂಶಗಳಿರುವ ಹಣ್ಣಿನ ತೋಟಗಳ ಅಭಿವೃದ್ಧಿ ಕಾರ್ಯಕ್ರಮದಡಿ ಆಸಕ್ತರಿಂದ ಅರ್ಜಿ ಕರೆಯಲಾಗಿದೆ. ಪೌಷ್ಠಿಕಾಂಶಗಳನ್ನು ಹೊಂದಿರುವ ಹಣ್ಣು, ತರಕಾರಿಗಳನ್ನು ಅಂಗನವಾಡಿ ಕೇಂದ್ರದ ಆವರಣ ಶಾಲಾ ಕೈತೋಟದಲ್ಲಿ, ಗ್ರಾಮ ಪಂಚಾಯಿತಿ ಕಚೇರಿ ಆವರಣ, ವಿದ್ಯಾರ್ಥಿ ನಿಲಯಗಳಿಗೆ ಹಾಗೂ ಶಾಲಾ ಮಕ್ಕಳ ಮನೆ ಅಂಗಳದ ಕೈತೋಟಗಳಿಗೆ ಗಿಡಗಳನ್ನು ವಿತರಿಸುವ ಕಾರ್ಯಕ್ರಮ ಇದಾಗಿದೆ. ಯೋಜನೆ ಅನುಷ್ಠಾನಗೊಳಿಸಲು ಆಸಕ್ತರು ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಸಂಸ್ಥೆಳಾಗಿದ್ದಲ್ಲಿ ನಿಗದಿತ ಅರ್ಜಿಯೊಂದಿಗೆ ದ್ವಿಪ್ರತಿಯಲ್ಲಿ ಆ.31ರೊಳಗೆ ಸಂಬಂಧಿಸಿದ ಗ್ರಾಪಂ ಕಚೇರಿ ಅಥವಾ ತಾಲೂಕು ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ತೋಟಗಾರಿಕೆ ಇಲಾಖೆ ರಾಯಚೂರು ಇವರನ್ನು ಸಂಪರ್ಕಿಸಲು ಕೋರಲಾಗಿದೆ.
ಅರ್ಜಿ ಆಹ್ವಾನ
ರಾಯಚೂರು: ದೇವದುರ್ಗ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಕರೆಯಲಾಗಿದೆ. ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಯನ್ನು ದ್ವಿಪ್ರತಿಯಲ್ಲಿ ಸೆ.13ರೊಳಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ನಗರಗುಂಡ ರಸ್ತೆ, ಸ್ತ್ರೀ ಶಕ್ತಿ ಭವನ, ದೇವದುರ್ಗ ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement