'ಮಕ್ಕಳಲ್ಲಿ ಕ್ರೀಡಾ ಮನೋಭಾವನೆ ಅಗತ್ಯ'
ಜೇವರ್ಗಿ: ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿಯೂ ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳುವುದು ಅಗತ್ಯ ಎಂದು ಜಿಲ್ಲಾ ಪಂಚಾಯತ್ ಪ್ರತಿ ಪಕ್ಷದ ನಾಯಕ ಗುರುಲಿಂಗಪ್ಪಗೌಡ ಆಂದೋಲ ಅಭಿಪ್ರಾಯಪಟ್ಟರು.
ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪಟ್ಟಣದಲ್ಲಿರುವ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ತಾಲೂಕುಮಟ್ಟದ ಕ್ರೀಡಾಕೂಟ ಉದ್ಘಾಟಿಸಿ, ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ತಮ್ಮದೇ ಆದ ಪ್ರತಿಭೆ ಅಡಗಿದ್ದು, ಅಂತಹ ಪ್ರತಿಭೆಗಳಿಗೆ ಕ್ರೀಡಾಕೂಟ ಉತ್ತಮ ವೇದಿಕೆಯಾಗಲಿದೆ ಎಂದರು.
ಜಿಪಂ ಸದಸ್ಯ ಶೋಭಾ ಬಾಣಿ ಮಾತನಾಡಿ, ಕ್ರೀಡಾಕೂಟಗಳಲ್ಲಿ ಸಮಯ ಪ್ರಜ್ಞೆ ಮುಖ್ಯ. ಆದರೆ ಕಾರ್ಯಕ್ರಮ ಆಯೋಜಕರು ನಿಗದಿತ ಸಮಯದಲ್ಲಿ ಕಾರ್ಯಕ್ರಮ ಆಯೋಜಿಸದಿರುವುದಕ್ಕೆ ಕಿಡಿ ಕಾರಿದರು.
ದೇಶ ಬಲಾಡ್ಯವಾಗಲು ವಿದ್ಯಾರ್ಥಿಗಳ ಪಾತ್ರ ಮಹತ್ತರ ವಿದ್ಯಾರ್ಥಿಗಳ ಸಾಮರ್ಥ್ಯ ಎತ್ತಿ ಹಿಡಿಯಬೇಕು ಎಂದು ಹೇಳಿದರು.
ತಾಪಂ ಅಧ್ಯಕ್ಷ ಶರಣಗೌಡ ಹರನೂರ, ಸಿದ್ರಾಮಪ್ಪಗೌಡ ಹರನೂರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾ ನರಸಿಂಹರೆಡ್ಡಿ ಮತ್ತು ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳು ಉಪಸ್ಥಿತರಿದ್ದರು.