ಶ್ರದ್ಧಾ ಯೋಗನೃತ್ಯಕ್ಕೆ ಒಲಿದ 5000 ಪ್ರೋತ್ಸಾಹಧನ
ಗುಲ್ಬರ್ಗ: ಸ್ವಾತಂತ್ರ್ಯೋತ್ಸವ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಗರದ ಸರ್ವಜ್ಞ ಚಿಣ್ಣರ ಲೋಕದ ವಿದ್ಯಾರ್ಥಿನಿ ಶ್ರದ್ಧಾ ಪಾಟೀಲ್ ವಿವಿಧ ಭಂಗಿಯ ಯೋಗನೃತ್ಯ ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು. ಅಲ್ಲದೆ, 5000 ಪ್ರೋತ್ಸಾಹಧನಕ್ಕೆ ಭಾಜನರಾದರು. ಶ್ರದ್ಧಾ ಅವರ ಪ್ರತಿಭೆ ಗುರುತಿಸಿ ಗುಲ್ಬರ್ಗ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಪ್ರೋತ್ಸಾಹಧನ ನೀಡಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ವಿದ್ಯಾರ್ಥಿನಿ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಪ್ರೊ. ಚನ್ನಾರೆಡ್ಡಿ ಪಾಟೀಲ್, ಅಧ್ಯಕ್ಷೆ ಗೀತಾ ಚನ್ನಾರೆಡ್ಡಿ ಪಾಟೀಲ್ ಹಾಗೂ ಪ್ರಾಚಾರ್ಯರು ಮತ್ತು ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.