ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಗೆಲ್ಲುವ ಆತ್ಮವಿಶ್ವಾಸ ಅವಶ್ಯ: ವಜ್ಜಲ್

Lingaraj Badiger
Updated On : 23 Aug 2013, 11:15 am

ಕ.ಪ್ರ.ವಾರ್ತೆ, ಲಿಂಗಸ್ಗೂರು, ಆ.22
ಯಾವುದೇ ಕ್ರೀಡಾಕೂಟದಲ್ಲಿ ಭಾಗವಹಿಸುವ ಮಕ್ಕಳು ಗೆಲ್ಲುವ ಆತ್ಮವಿಶ್ವಾಸ ಹೊಂದಬೇಕೆಂದು ಶಾಸಕ ಮಾನಪ್ಪ ವಜ್ಜಲ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು (ಪ್ರೌಢ ಶಾಲಾ) ವಿಭಾಗದ ಮೈದಾನದಲ್ಲಿ ಗುರುವಾರ ಹಮ್ಮಿಕೊಂಡಿದ್ದ 2013- 14ನೇ ಸಾಲಿನ ಲಿಂಗಸ್ಗೂರು ವಲಯಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗಲಿದೆ. ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಬೆಳೆಯಲು ಕ್ರೀಡಾ ತಂಡಗಳ ದೈಹಿಕ ಶಿಕ್ಷಕರ ಸಹಕಾರ ಅಗತ್ಯವಾಗಿದೆ.  ಕ್ರೀಡೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಪರಸ್ಪರ ಸೌಹಾರ್ದಯುತವಾಗಿ ಆಟವಾಡಬೇಕು. ಕ್ರೀಡೆಯಲ್ಲಿ ಸೋಲು, ಗೆಲುವನ್ನು ಸಮನಾಗಿ ಸ್ವೀಕರಿಸುವ ಜೊತೆಗೆ ಕ್ರೀಡಾ ನಿಯಮ ಪಾಲನೆ ಮಾಡಬೇಕು.
ಲಿಂಗಸ್ಗೂರು ವಲಯಮಟ್ಟದ ಕ್ರೀಡಾಕೂಟಲ್ಲಿ ಭಾಗವಹಿಸಿದ 13 ಶಾಲೆಗಳ ಮಕ್ಕಳು ತಾಲೂಕು, ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಗೆಲುವು ಸಾಧಿಸುವ ಮೂಲಕ ಶಾಲೆಗಳ ಹೆಸರು ತರಬೇಕೆಂದು ಶುಭ ಹಾರೈಸಿದರು.
ಜಿಪಂ ಸದಸ್ಯ ಭೂಪನಗೌಡ ಕರಡಕಲ್ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ. ಮಕ್ಕಳು ಯಾವುದೇ ದುಶ್ಚಟಗಳಿಗೆ ಬಲಿಯಾಗದೆ ಇಂತಹ ಕ್ರೀಡಾಕೂಟದಲ್ಲಿ ಭಾಗವಹಿಸಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಪಂ ಸದಸ್ಯ ಭೂಪನಗೌಡ ಕರಡಕಲ್, ಕ್ಷೇತ್ರ ಶಿಕ್ಷಣಾಧಿಕಾರಿ ಅಮರಪ್ಪ ಭೋವಿ, ಮುಖ್ಯಗುರು ಶಂಕರಗೌಡ, ದೈಹಿಕ ಶಿಕ್ಷಕಿ ಗಂಗಮ್ಮ, ಮುಖಂಡರಾದ ಗಿರಿಮಲ್ಲನಗೌಡ ಕರಡಕಲ್, ಶಿವಾನಂದ ಐದನಾಳ, ಎಸ್.ಆರ್. ರಸೂಲ, ಖಾಜಾ ಹುಸೇನ, ಚಂದ್ರಶೇಖರ ವಕೀಲರು, ನಾಗರಾಜ, ಮಹ್ಮದ ಖಾಜಾ ಹುಸೇನ, ಖಾಜಾಪಾಶಾ, ಹೇಮಂತ, ಹನುಮಂತಪ್ಪ, ವೀರಭದ್ರಪ್ಪ, ಶರೀಫಸಾಬ ಸೇರಿದಂತೆ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement