29ರಿಂದ ಮಾಹಿತಿ ಆಂದೋಲನ
ರಾಯಚೂರು: ಭಾರತ ಸರ್ಕಾರದ ವಾರ್ತಾ ಇಲಾಖೆ, ಕೇಂದ್ರ ಸಮಾಚಾರ ಮತ್ತು ಪ್ರಸಾರ ಸಚಿವಾಲಯ, ಅನ್ಯ ಮಾದ್ಯಮ ಘಟಕಗಳು, ಜಿಲ್ಲಾಡಳಿತ ಮತ್ತು ಜಿಪಂ ಸಹಯೋಗದಲ್ಲಿ ಆ.29 ರಿಂದ ಆ.31 ರವರೆಗೆ ಭಾರತ ನಿರ್ಮಾಣ ಸಾರ್ವಜನಿಕ ಮಾಹಿತಿ ಆಂದೋಲನ ಆಯೋಜಿಸಲಾಗಿದೆ.
ಆ.29 ರಂದು ಬೆಳಗ್ಗೆ 11ಕ್ಕೆ ನಗರದ ಪಂ.ಸಿದ್ದರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಉದ್ಘಾಟನೆ ಸಮಾರಂಭ ಆಯೋಜಿಸಿದೆ. ಕಾರ್ಯಕ್ರಮವನ್ನು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ ಪಾಟೀಲ್ ಉದ್ಘಾಟಿಸಲಿದ್ದಾರೆ.
ವಸ್ತು ಪ್ರದರ್ಶನದ ಮಳಿಗೆಗಳ ಉದ್ಘಾಟನೆ ಸಂಸದ ಎಸ್.ಫಕೀರಪ್ಪ ನೆರವೇರಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಗರ ವಿಧಾನಸಭೆ ಕ್ಷೇತ್ರದ ಸದಸ್ಯ ಡಾ.ಶಿವರಾಜ ಪಾಟೀಲ್ ವಹಿಸುವರು. ಸಂಸದ ಶಿವರಾಮಗೌಡ, ಶಾಸಕರಾದ ವೆಂಕಟೇಶ ನಾಯಕ, ಹಂಪಯ್ಯ ನಾಯಕ, ಮಾನಪ್ಪ ವಜ್ಜಲ್, ಹಂಪನಗೌಡ ಬಾದರ್ಲಿ, ಪ್ರತಾಪಗೌಡ ಪಾಟೀಲ್, ತಿಪ್ಪರಾಜು ಹವಾಲ್ದಾರ್ ಸೇರಿ ಅನೇಕರು ಪಾಲ್ಗೊಳ್ಳಲಿದ್ದಾರೆ.