ಜನರ ಸಮಸ್ಯೆಗೆ ಸ್ಪಂದಿಸಲು ತಾಕೀತು
ದೇವದುರ್ಗ: ತಾಲೂಕಿನ ಜನತೆಯ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ಕಾರ್ಯ ಅಧಿಕಾರಿಗಳು ಮಾಡಬೇಕು. ಜನತೆಗೆ ತೊಂದರೆಯಾಗುವ ರೀತಿಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಎ.ವೆಂಕಟೇಶ ನಾಯಕ್ ಎಚ್ಚರಿಸಿದರು.
ಅವರು ಶುಕ್ರವಾರ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಪುರಸಭೆ ವ್ಯಾಪ್ತಿಯಲ್ಲಿ ನಗರ ವಾಜಪೇಯಿ ಯೋಜನೆ ಅಡಿ ಮಂಜೂರಾದ ಮನೆಗಳ ಚೆಕ್ ಕೂಡಲೇ ನೀಡಲು ಸೂಚಿಸಿ ಅಧಿಕಾರಿಗಳು ವಿಳಂಬ ಮಾಡಿದಲ್ಲಿ ಕಠಿಣ ಕ್ರಮಕ್ಕೆ ಆದೇಶಿಸುವುದಾಗಿ ತಿಳಿಸಿದರು.
ವಿಳಂಬ ಸಲ್ಲದು: ಈಗಾಗಲೇ ಈ ಯೋಜನೆ ಅಡಿ ಆಯ್ಕೆಯಾದ ಫಲಾನುಭವಿಗಳ ಸಾಲ ಮಾಡಿ ಮನೆ ನಿರ್ಮಿಸಿಕೊಂಡಿದ್ದಾರೆ. ಮನೆ ನಿರ್ಮಿಸಿ ಕೊಂಡವರಿಗೆ ಹಣ ನೀಡದೇ ಅಧಿಕಾರಿಗಳು ವಿಳಂಬ ಮಾಡುತ್ತಿರುವುದು ಸರಿಯಲ್ಲ. ಇಂಥ ಪರಿಸ್ಥಿತಿ ಉದ್ಭವಿಸದಂತೆ ಅಧಿಕಾ ರಿಗಳು ಮುನ್ನೆಚ್ಚರಿಕೆ ವಹಿಸುವಂತೆ ಆದೇಶಿಸಿದರು.
ಪಟ್ಟಣದ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ ಟೆಂಡರ್ ಕರೆದು ಕಾಮಗಾರಿ ಕೈಗೆತ್ತಿಕೊಳ್ಳಬೇಕು. ಅದರಂತೆ ಪಟ್ಟಣದ ಜನತೆಗೆ ಕುಡಿಯುವ ನೀರಿನ ಕಾಮಗಾರಿ ಅತೀ ಶೀಘ್ರದಲ್ಲಿ ಟೆಂಡರ್ ಕರೆಯುವಂತೆ ಪುರಸಭೆ ಅಧಿಕಾರಿಗಳಿಗೆ ಅವರು ತಿಳಿಸಿದರು.
ಸಹಾಯಕ ಆಯುಕ್ತೆ ಮಂಜುಶ್ರೀ, ತಹಸೀಲ್ದಾರ್ ತುಕಾರಾಮ ಕಲ್ಯಾಣ್ಕರ್, ಮಾಜಿ ಎಂಎಲ್ಸಿ ಬಸವರಾಜ ಪಾಟೀಲ್ ಇಟಗಿ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಮುಖಂಡ ಬಿ.ವಿ. ನಾಯಕ, ಪುರಸಭೆಯ ಮುಖ್ಯಾಧಿಕಾರಿ ಶ್ರೀಪಾದ ಭಟ್, ಹುಸೇನಸಾಬ್ ನೀಲುವಂಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಸಯ್ಯ ಶಾಖೆ, ಭೀಮನಗೌಡ ನಾಗಡದಿನ್ನಿ, ಬಾಪೂಗೌಡ ಪಾಟೀಲ್, ಶೇಖ್ ಮುನ್ನಾ ಭಾಯ್, ಫಾರೂಖ್ ಅಹ್ಮದ್, ವಿ. ಎಂ. ಮೇಟಿ, ಸೇರಿ ಅಧಿಕಾರಿಗಳು ಉಪಸ್ಥಿತರಿದ್ದರು.
--