ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

'ಸಾಲದ ಹೊರೆ ಹೆಚ್ಚಿಸಿದ ಸರ್ಕಾರಗಳು'

Lingaraj Badiger
Updated On : 24 Aug 2013, 11:10 am

ಕ.ಪ್ರ.ವಾರ್ತೆ  ರಾಯಚೂರು  ಆ.23
ದೇಶಕ್ಕಾಗಿ ಮಡಿದ ವೀರರು, ಮಹಾನ್ ವ್ಯಕ್ತಿಗಳ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಎಐಡಿವೈಒ ಸಂಘಟನೆಯ ರಾಜ್ಯಾಧ್ಯಕ್ಷ ರಾಮಾಂಜನಪ್ಪ ಕರೆ ನೀಡಿದರು.
ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಎಐಡಿವೈಒ ಸಂಘಟನೆಯ 3ನೇ ಜಿಲ್ಲಾ ಯುವ ಸಮ್ಮೇಳನದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಭ್ರಷ್ಟಾಚಾರ ಮಿತಿಮೀರಿದ್ದು, ಈ ಸಮಸ್ಯೆ ನಿವಾರಣೆಯಲ್ಲಿ ಆಡಳಿತರೂಢ ಸರ್ಕಾರಗಳು ವಿಫಲವಾಗಿವೆ. ಅದರಿಂದಾಗಿ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಟೀಕಿಸಿದರು.
ವಿದೇಶಗಳಿಂದ ಕೋಟಿ ಕೋಟಿ ರು. ಸಾಲ ಪಡೆದು ದೇಶವನ್ನು ಅಭಿವೃದ್ಧಿಗೊಳಿಸಲು ಮುಂದಾಗುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಆರ್ಥಿಕ ನೀತಿಯಿಂದಾಗಿ ಹಾಗೂ ವ್ಯಾಪಕ ಭ್ರಷ್ಟಾಚಾರದಿಂದಾಗಿ ಜನಸಾಮಾನ್ಯರ ಮೇಲೆ ಸಾಲದ ಹೊರೆ ಹೆಚ್ಚುತ್ತಿದೆ ಎಂದು ಟೀಕಿಸಿದರು.
ಕೋಟಿ ಕೋಟಿ ಹಣ ವೆಚ್ಚ ಮಾಡಿ ಚುನಾವಣೆ ಗೆಲ್ಲುತ್ತಿರುವವರ ಮಧ್ಯೆ ಪ್ರಾಮಾಣಿಕರು, ಬಡವರು ಚುನಾವಣೆಗಿಳಿಯದಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿ ಹೆಸರಿನಲ್ಲಿ ಕೊಳ್ಳೆ ಹೊಡೆಯುವ ಹಣವನ್ನೇ ಮತ್ತೆ ಚುನಾವಣೆ ವೇಳೆ ಬಳಕೆ ಮಾಡುವ ಮೂಲಕ ದೇಶವನ್ನು ವಿನಾಶಕ್ಕೆ ಕೊಂಡೊಯ್ಯುವ ಕಾರ್ಯ ರಾಜಕೀಯ ನಾಯಕರು ಮಾಡುತ್ತಿದ್ದಾರೆಂದು ಆರೋಪಿಸಿದರು.
ಸಂಘಟನೆಯ ರಾಜ್ಯ ಉಪಾಧ್ಯಕ್ಷ ಶರಣಗೌಡ ಗೂಗಲ್ ಮಾತನಾಡಿದರು. ಸಮಾರಂಭದಲ್ಲಿ ಜಿಲ್ಲಾ ಕಾರ್ಯದರ್ಶಿ ಚನ್ನಬಸವ ಜಾನೇಕಲ್, ಶರಣಪ್ಪ ಉದ್ಬಾಳ್ ಮತ್ತಿತರರು ಇದ್ದರು.
ವಿಧೆಡೆಯಿಂದ ಆಗಮಿಸಿದ್ದ ಸಂಘಟನೆಯ ಕಾರ್ಯಕರ್ತರು ಹಾಗೂ ಯುವಕರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement