ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ಜಿಲ್ಲಾ ಉಸ್ತುವಾರಿ ಸಚಿವರೇ ಗೈರು

Mainashree
Updated On : 26 Aug 2013, 11:17 am

ರಾಯಚೂರು: ಜಿಲ್ಲೆಯಲ್ಲಿ ನಡೆಯುವ ಸರ್ಕಾರದ ಪ್ರಮುಖ ಕಾರ್ಯಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಜರಿದ್ದು, ಉಸ್ತುವಾರಿ ವಹಿಸುವುದು ಸಾಮಾನ್ಯ. ಆದರೆ ಸಿಂಧನೂರಿನಲ್ಲಿ ಭಾನುವಾರ ನಡೆದ ಸಿಎಂ ಸಿದ್ದರಾಮಯ್ಯ ಅವರಿದ್ದ ಕಾರ್ಯಕ್ರಮದಿಂದಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ದೂರವುಳಿದಿದ್ದು ಅನುಮಾನಕ್ಕೆ ಎಡೆ ಮಾಡಿತು. ಸಿಂಧನೂರು ನಗರದ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಗೈರು ಹಾಜರಿ ಎದ್ದು ಕಾಣುತ್ತಿತ್ತು. ಸಮಾರಂಭದ ಬ್ಯಾನರ್, ಆಹ್ವಾನ ಪತ್ರಿಕೆಗಳಲ್ಲಿ ಸಚಿವರ ಹೆಸರಿತ್ತು. ಆದರೆ ಸಚಿವರು ಪಾಲ್ಗೊಳ್ಳದಿರುವುದು ಮಾತ್ರ ಅಚ್ಚರಿಗೆ ದಾರಿಯಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement