ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಯಚೂರು

ನಗರಸಭೆ ಅಧ್ಯಕ್ಷ ಸ್ಥಾನ ಮೀಸಲು ಸಾಮಾನ್ಯ ವರ್ಗಕ್ಕೆ

Mainashree
Updated On : 26 Aug 2013, 11:15 am

ಸಿಂಧನೂರು: ನಗರಸಭೆ ಚುನಾವಣೆ ನಡೆದು ಐದಾರು ತಿಂಗಳ ನಂತರ ಕೊನೆಗೂ ರಾಜ್ಯ ಸರ್ಕಾರ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಿಸಿದೆ.
ಸಿಂಧನೂರು ನಗರಸಭೆ ಅಧ್ಯಕ್ಷ ಸ್ಥಾನ ಈ ಬಾರಿ ಸಾಮಾನ್ಯ ವರ್ಗ ಹಾಗೂ ಉಪಾಧ್ಯಕ್ಷ ಸ್ಥಾನ ಎಸ್‌ಸಿ ಮಹಿಳೆಗೆ ಮೀಸಲಾಗಿದೆ. ಸತತ ನಾಲ್ಕು ಬಾರಿ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿರುವ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಾಫರ್ ಜಾಗೀರದಾರ ನಗರಸಭೆ ಅಧ್ಯಕ್ಷರಾಗುವ ಸಾಧ್ಯತೆಗಳು ದಟ್ಟವಾಗಿವೆ.
ಶಾಸಕ ಬಾದಲರ್ ಹಂಪನಗೌಡ ಚುನಾವಣೆ ಸಂದರ್ಭದಲ್ಲಿ ಬಹಿರಂಗವಾಗಿ ಈ ಬಾರಿ ಕಾಂಗ್ರೆಸ್‌ಗೆ ಬಹುಮತ ಸಿಕ್ಕರೆ ಜಾಫರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದಾಗಿ ಹೇಳಿಕೊಂಡಿದ್ದರು. ಇದೀಗ ಅಧ್ಯಕ್ಷ ಸ್ಥಾನದ ಮೀಸಲಾತಿ ಸಾಮಾನ್ಯ ವರ್ಗಕ್ಕೆ ಒಲಿದು ಬಂದಿರುವುದರಿಂದ ಜಾಫರ್ ಜಾಗಿದಾರ ನಗರಸಭೆ ಅಧ್ಯಕ್ಷರಾಗುವಲ್ಲಿ ಯಾವುದೇ ಅಡೆ-ತಡೆ ಇಲ್ಲದಂತಾಗಿದೆ. ಅವರನ್ನೇ ನಗರಸಭೆ ಅಧ್ಯಕ್ಷರನ್ನಾಗಿ ಮಾಡಲಾಗುವುದು ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ನ್ನು ಎಸ್‌ಟಿ ಮಹಿಳೆ ಮೀಸಲಾತಿಗೆ ಒಬ್ಬ ಮಹಿಳಾ ಸದಸ್ಯೆ ಮಾತ್ರ ಇರುವುದರಿಂದ ಅವರೂ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿವೆ. ನಿರೀಕ್ಷೆಗಳು ಏನಾಗುತ್ತವೆಯೋ ಕಾದು ನೋಡಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement