ಮೂವರು ಆಸ್ಪತ್ರೆಗೆ
ದೇವದುರ್ಗ: ತಾಲೂಕಿನ ವಿವಿಧೆಡೆ ಡೆಂಘೀ ಜ್ವರದ ಪ್ರಕರಣಗಳು ವರದಿಯಾಗಿದ್ದು, ಶಂಕಿತ ಡೆಂಘೀ ಜ್ವರದಿಂದ ಬಳಲಿದ ಮೂವರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಂಕಿತ ಡೆಂಘೀ ಜ್ವರದಿಂದ ಬಳಲುತ್ತಿದ್ದ ತಾಲೂಕಿನ ನಾಗೋಲಿ ಗ್ರಾಮದ ಚೈತ್ರಾ(6) ಎಂಬ ಬಾಲಕಿಯು ಬಳ್ಳಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅದೇ ಗ್ರಾಮದ ಆಂಜನೇಯ(12) ಎಂಬಾತನನ್ನು ರಾಯಚೂರಿನ ಶಿವಂ ಆಸ್ಪತ್ರೆ ಹಾಗೂ ಭಾಗ್ಯ ಎಂಬ ಬಾಲಕಿಯನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಮೂವರು ಕಳೆದ ಕೆಲ ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದು, ಡೆಂಘೀ ಜ್ವರದ ಶಂಕೆಯ ಹಿನ್ನೆಲೆ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಕುಟುಂಬದ ಮೂಲಗಳು ಹೇಳಿವೆ.