ಪುರಸಭೆ ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಗೆ ದಿನಾಂಕ ನಿಗದಿ
ಲಿಂಗಸ್ಗೂರು: ಸ್ಥಳೀಯ ಪುರಸಭೆ ಹಾಗೂ ಮುದಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ದಿನಾಂಕ ನಿಗದಿ ಪಡಿಸಲಾಗಿದೆ.
ಲಿಂಗಸ್ಗೂರು ಪುರಸಭೆ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಸೆ.11 ರಂದು ಚುನಾವಣೆ ನಡೆಯಲಿದೆ. ಅದೇರೀತಿ ಮುದಗಲ್ ಪಟ್ಟಣ ಪಂಚಾಯ್ತಿ ಅಧ್ಯಕ್ಷ ಸ್ಥಾನ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಸೆ.12 ರಂದು ಚುನಾವಣೆ ಜರುಗಲಿದೆ ಎಂದು ತಹಸೀಲ್ದಾರ್ ಹಾಗೂ ಚುನಾವಣಾಧಿಕಾರಿ ಜಿ.ಎಸ್. ಮಹಾಜನ್ ತಿಳಿಸಿದ್ದಾರೆ.
ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಸ್ಪರ್ಧಿಸಲು ಇಚ್ಛಿಸುವ ಸದಸ್ಯರು ನಾಮನಿರ್ದೇಶನ ಪತ್ರವನ್ನು ನಿಗದಿತ ದಿನದಂದು ಬೆಳಿಗ್ಗೆ 9ರಿಂದ 11 ಗಂಟೆವರೆಗೆ ಚುನಾವಣಾಧಿಕಾರಿಗೆ ಸಲ್ಲಿಸಬಹುದಾಗಿದ್ದು, ಅಂದು ಮಧ್ಯಹ್ನ 1ಕ್ಕೆ ಚುನಾವಣಾ ಸಭೆ ಜರುಗಲಿದ್ದು, ಸಭೆಯಲ್ಲಿ ಸದಸ್ಯರ ಹಾಜರಾತಿ ಪಡೆಯಲಾಗುವುದು. ನಂತರ ನಾಮಪತ್ರಗಳ ಪರಿಶೀಲನೆ, 1-30 ರೊಳಗೆ ನಾಮಪತ್ರ ಹಿಂತೆಗೆದುಕೊಳ್ಳಲು ಅವಕಾಶವಿದ್ದು, ಮಧ್ಯಾಹ್ನ 1-30ಕ್ಕೆ ಸದಸ್ಯರು ಸಭೆಯಲ್ಲಿ ಕೈ ಎತ್ತುವ ಮೂಲಕ ಮತದಾನ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.