ಸೆ.2ರಂದು ವಿಚಾರ ಸಂಕಿರಣ
ರಾಯಚೂರು: ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ, ಜಿಪಂ ಹಾಗೂ ಜಿಲ್ಲಾ ಪೊಲೀಸ್ ಇಲಾಖೆ ಸಹಯೋಗದಲ್ಲಿ ಸೆ.2 ರಂದು ನಗರದಲ್ಲಿ ಪರಿಶಿಷ್ಟ ಜನಾಂಗದವರ ಮೇಲಿನ ದೌರ್ಜನ್ಯ ತಡೆಗಟ್ಟುವಿಕೆ, ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಪರಿಶಿಷ್ಟ ಜಾತಿಪಂಗಡದ ಜನಾಂಗದವರ ಸರ್ವಾಂಗೀಣ ಅಭಿವೃದ್ಧಿ ಕುರಿತು ವಿಚಾರ ಸಂಕಿರಣ ಆಯೋಜಿಸಲಾಗಿದೆ.
ಅಂದು ನಗರದ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಎಸ್.ಎನ್. ನಾಗರಾಜ್ ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಜಿಪಂ ಸಿಇಒ ಡಾ. ಮುದ್ದುಮೋಹನ್ ವಹಿಸುವರು. ಎಸ್ಪಿ ಎಸ್.ಬಿ. ಬಿಸನಳ್ಳಿ, ಸಹಾಯಕ ಆಯುಕ್ತೆ ಮಂಜುಶ್ರೀ, ಪೌರಾಯುಕ್ತ ಮಂಜುನಾಥ್, ಅಪರ ಜಿಲ್ಲಾಧಿಕಾರಿ ಎಂ. ತಿಮ್ಮಪ್ಪ, ಜಿಪಂ ಉಪ ಕಾರ್ಯದರ್ಶಿ ಮುಕ್ಕಣ್ಣ ಕರಿಗಾರ್, ಮುಖ್ಯ ಯೋಜನಾಧಿಕಾರಿ ಡಾ.ಟಿ. ರೋಣಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಸಿರಸಗಿಕರ್ ನಾಗಣ್ಣ ಪಾಲ್ಗೊಳ್ಳಲಿದ್ದಾರೆ.
ಉಪನ್ಯಾಸಕರಾಗಿ ರಾಯಚೂರು ಕೃಷಿ ವಿವಿ ಸಹ ಪ್ರಾಧ್ಯಾಪಕಿ ಡಾ. ಜಾಗೃತಿ ದೇಶಮಾನ್ಯೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಶ್ರೀಮಂತ ಬಿ. ಹೊಳಲಕರ್ ಪಾಲ್ಗೊಳ್ಳಲಿದ್ದಾರೆಂದು ಪ್ರಕಟಣೆ ತಿಳಿಸಿದೆ.